ಗ್ರಾಮೀಣ ಅಭಿವೃದ್ಧಿಗೆ ಶಾಸಕ ಜಿ.ಎಸ್. ಪಾಟೀಲರ ಶ್ರಮ ಶ್ಲಾಘನೀಯ : ಡಿ.ಡಿ. ಮೋರನಾಳ
ಗದಗ, 30 ಮೇ (ಹಿ.ಸ.) : ಆ್ಯಂಕರ್ : ಕ್ಷೇತ್ರದ ಪ್ರತಿಯೊಬ್ಬ ನಾಗರಿಕರಿಗೂ ಸರ್ಕಾರದ ಗ್ಯಾರಂಟಿ ಯೋಜನೆಗಳ ಸೌಲಭ್ಯ ತಲುಪಿಸುವ ಜೊತೆಗೆ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವ ಶಾಸಕ ಜಿ.ಎಸ್. ಪಾಟೀಲರು ಜನತೆಯ ನಿಜವಾದ ಜನನಾಯಕರು ಎಂದು ಮುಂಡರಗಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯ
ಫೋಟೋ


ಗದಗ, 30 ಮೇ (ಹಿ.ಸ.) :

ಆ್ಯಂಕರ್ : ಕ್ಷೇತ್ರದ ಪ್ರತಿಯೊಬ್ಬ ನಾಗರಿಕರಿಗೂ ಸರ್ಕಾರದ ಗ್ಯಾರಂಟಿ ಯೋಜನೆಗಳ ಸೌಲಭ್ಯ ತಲುಪಿಸುವ ಜೊತೆಗೆ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವ ಶಾಸಕ ಜಿ.ಎಸ್. ಪಾಟೀಲರು ಜನತೆಯ ನಿಜವಾದ ಜನನಾಯಕರು ಎಂದು ಮುಂಡರಗಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಡಿ.ಡಿ. ಮೋರನಾಳ ಹೇಳಿದರು.

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಪ್ರಗತಿ ಕಾಲೋನಿ ಯೋಜನೆ ಅಡಿಯಲ್ಲಿ ಹಮ್ಮಿಕೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ವೆಂಕಟಾಪೂರ ಗ್ರಾಮದ ಎಸ್.ಸಿ. ಕಾಲೋನಿಯಲ್ಲಿ ₹15 ಲಕ್ಷ ವೆಚ್ಚದ ಸಿ.ಸಿ. ರಸ್ತೆ ಹಾಗೂ ಹೈಮಾಸ್ಟ್ ಅಳವಡಿಕೆ, ಹೈತಾಪೂರ ಗ್ರಾಮದ ಎಸ್.ಸಿ. ಕಾಲೋನಿಯಲ್ಲಿ ₹25 ಲಕ್ಷ ವೆಚ್ಚದ ಸಿ.ಸಿ. ರಸ್ತೆ, ಮುರಡಿ ತಾಂಡಾ ಗ್ರಾಮದ ಎಸ್.ಸಿ. ಕಾಲೋನಿಯಲ್ಲಿ ₹15 ಲಕ್ಷ ವೆಚ್ಚದ ಸಿ.ಸಿ. ರಸ್ತೆ ಮತ್ತು ಹೈಮಾಸ್ಟ್ ಸೇರಿದಂತೆ ₹50 ಲಕ್ಷ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಶಾಲೆಗಳ ನವೀಕರಣ ಹಾಗೂ ಸ್ಮಾರ್ಟ್ ತರಗತಿ ಕೊಠಡಿಗಳ ಅಭಿವೃದ್ಧಿಗೆ ಶಾಸಕ ಜಿ.ಎಸ್. ಪಾಟೀಲರು ವಿಶೇಷ ಆದ್ಯತೆ ನೀಡುತ್ತಿದ್ದಾರೆ ಎಂದು ಡಿ.ಡಿ. ಮೋರನಾಳ ಹೇಳಿದರು.

ರೋಣ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಿಥುನ ಜಿ. ಪಾಟೀಲ ಮಾತನಾಡಿ, ಶಾಸಕ ಜಿ.ಎಸ್. ಪಾಟೀಲರು ಕ್ಷೇತ್ರದಾದ್ಯಂತ ನೂರಾರು ಕೋಟಿ ರೂಪಾಯಿ ಅನುದಾನ ತಂದು ರಸ್ತೆ, ಶಿಕ್ಷಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ವೇಗ ನೀಡಿದ್ದಾರೆ. ಗ್ರಾಮಸ್ಥರು ಸಹಕಾರ ನೀಡಿದರೆ ಇನ್ನಷ್ಟು ಗುಣಮಟ್ಟದ ಕಾಮಗಾರಿಗಳನ್ನು ಮಾಡಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಅದರ ಭಾಗವಾಗಿ ಗ್ರಾಮೀಣ ರಸ್ತೆ ಹಾಗೂ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು.

ಮುಂಡರಗಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ವಿಜಯಕುಮಾರ ಬೆಣ್ಣೆ ಹಾಗೂ ಸಮಾಜ ಕಲ್ಯಾಣಾಧಿಕಾರಿ ಉದಯಕುಮಾರ ಯಲಿವಾಳ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಎಸ್.ಸಿ. ಕಾಲೋನಿಗಳ ಅಭಿವೃದ್ಧಿಗೆ ವಿವಿಧ ಕಾಮಗಾರಿಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮುರಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನವ್ವ ಕಾರಬಾರಿ, ಉಪಾಧ್ಯಕ್ಷೆ ಲಲಿತಾ ಪವಾರ, ಸೋಮು ಹೈತಾಪೂರ, ವಿಶ್ವನಾಥ ಪಾಟೀಲ, ಸತ್ಯಪ್ಪ ಪೂಜಾರ, ಪ್ರಕಾಶ ಸಜ್ಜನ, ಗುರಣ್ಣ ಸಂಶಿ, ವಿರುಪಣ್ಣ ಮರಿಗೌಡರ, ಮಲ್ಲೇಶ ಪೂಜಾರ, ಫಾರುಕ್ ಅಬ್ದುಲ್ ಗೌಡ ಡೋಟ್ನಾಳ, ವೀರೇಶ್ ರೋಣದ, ಮಂಜುನಾಥ ಹಿರೇಮಣಿ, ಮಲ್ಲಪ್ಪ ಕೊಡ್ಲಿ, ವಸಂತ ಮಾಳಗಿಮನಿ, ಹನಮಂತ ಕಡಕೋಳ, ಮಲ್ಲಪ್ಪ ಹಳ್ಳಿ, ಶಂಕರಗೌಡ್ರ ಹಿರೇಗೌಡರ, ಚೆನ್ನಪ್ಪ ಹಳ್ಳಿ, ಶಂಕರಗೌಡ ಪಾಟೀಲ, ದೇವಪ್ಪ ಕಟಗಿ, ಸುರೇಶ್ ಗೋಡಿ, ಮರಡೆಪ್ಪ ಹಳ್ಳಿ, ಮಲ್ಲಿಕಾರ್ಜುನ ಕೊಡ್ಲಿ, ಶೇಖರ ಫವಾರ, ಮನೋಜ ರಾಠೋಡ, ಉಪತಹಶೀಲ್ದಾರ ಎಸ್.ಎಸ್. ಬಿಚ್ಚಾಲಿ, ಆರೋಗ್ಯ ಅಧಿಕಾರಿ ಪ್ರಭು ಬಗಲಿ, ಪಿಡಿಒ ಲತಾ ಮಾನೆ, ಪಿಡಿಒ ಸಂತೋಷ ನಾಯಕ, ಗ್ರಾಮ ಪಂಚಾಯಿತಿ ಸದಸ್ಯರು, ಮಹಿಳೆಯರು ಹಾಗೂ ಯುವಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande