ಕೃಷಿ ಅಧಿಕಾರಿಗಳೊಂದಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಸಭೆ
ನಾನಾ
Meeting


ದಾವಣಗೆರೆ, 30 ಮೇ (ಹಿ.ಸ.) :

ಆ್ಯಂಕರ್ : ದಾವಣಗೆರೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರೊಂದಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರು ಸಭೆ ನಡೆಸಿ, ಕ್ಷೇತ್ರದ ರೈತರು ಎದುರಿಸುತ್ತಿರುವ ನಾನಾ ಸಮಸ್ಯೆಗಳು ಹಾಗೂ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸಿದರು.

ಸಭೆಯಲ್ಲಿ ರೈತರಿಗೆ ಸರ್ಕಾರದ ನಾನಾ ಯೋಜನೆಗಳ ಸೌಲಭ್ಯಗಳು ಪರಿಣಾಮಕಾರಿಯಾಗಿ ಮತ್ತು ಸಕಾಲದಲ್ಲಿ ತಲುಪುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಕೃಷಿ ಇಲಾಖೆಯ ಕಾರ್ಯಕ್ರಮಗಳ ಅನುಷ್ಠಾನ ಮತ್ತು ರೈತರಿಗೆ ದೊರೆಯುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಲಾಯಿತು.

ಇದೇ ವೇಳೆ ಕೃಷಿ ಉತ್ಪಾದಕತೆ ಹೆಚ್ಚಿಸುವುದು, ಆಧುನಿಕ ಕೃಷಿ ತಂತ್ರಜ್ಞಾನಗಳ ಅಳವಡಿಕೆ, ನೀರಿನ ಸಮರ್ಪಕ ಬಳಕೆ ಹಾಗೂ ರೈತರ ಆದಾಯ ಹೆಚ್ಚಿಸಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು.

ರೈತರು ಕೃಷಿಯಲ್ಲಿ ಹೊಸ ತಂತ್ರಜ್ಞಾನ ಮತ್ತು ಉತ್ತಮ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಹೆಚ್ಚು ಉತ್ಪಾದನೆ ಹಾಗೂ ಉತ್ತಮ ಆದಾಯ ಗಳಿಸುವಂತಾಗಬೇಕು ಎಂದು ಸಂಸದೆ ಪ್ರಭಾ ಮಲ್ಲಿಕಾರ್ಜುನ ಅಭಿಪ್ರಾಯಪಟ್ಟರು.

ಕೃಷಿ ಕ್ಷೇತ್ರದ ಸವಾಲುಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳು ರೈತರೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಅವರು ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande