ಅಂಕೋಲ ಸಮೀಪ ಖಾಸಗಿ ಬಸ್ ಪಲ್ಟಿ ; ಓರ್ವ ಸಾವು, 21 ಪ್ರಯಾಣಿಕರಿಗೆ ಗಾಯ
ಕಾರವಾರ, 30 ಮೇ (ಹಿ.ಸ.) : ಆ್ಯಂಕರ್ : ಹೈದರಾಬಾದ್ನಿಂದ ಗೋವಾಗೆ ತೆರಳುತ್ತಿದ್ದ ಸೀಬರ್ಡ್ ಸಂಸ್ಥೆಯ ಖಾಸಗಿ ಬಸ್ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕರು ಮೃತಪಟ್ಟಿದ್ದು, 21 ಮಂದಿ ಗಾಯಗೊಂಡಿರುವ ಘಟನೆ ಅಂಕೋಲ ತಾಲೂಕಿನ ಕಂಚಿನಬಾಗಿಲು–ಅಗಸೂರು ನಡುವಿನ
Accident


ಕಾರವಾರ, 30 ಮೇ (ಹಿ.ಸ.) :

ಆ್ಯಂಕರ್ : ಹೈದರಾಬಾದ್ನಿಂದ ಗೋವಾಗೆ ತೆರಳುತ್ತಿದ್ದ ಸೀಬರ್ಡ್ ಸಂಸ್ಥೆಯ ಖಾಸಗಿ ಬಸ್ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕರು ಮೃತಪಟ್ಟಿದ್ದು, 21 ಮಂದಿ ಗಾಯಗೊಂಡಿರುವ ಘಟನೆ ಅಂಕೋಲ ತಾಲೂಕಿನ ಕಂಚಿನಬಾಗಿಲು–ಅಗಸೂರು ನಡುವಿನ ಪ್ರದೇಶದಲ್ಲಿ ನಡೆದಿದೆ.

ಪೊಲೀಸರ ಮಾಹಿತಿ ಪ್ರಕಾರ, ಬಸ್ಸಿನಲ್ಲಿ ಒಟ್ಟು 36 ಮಂದಿ ಪ್ರಯಾಣಿಕರಿದ್ದು, ಅಪಘಾತದಲ್ಲಿ 21 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ತಕ್ಷಣವೇ ಅಂಕೋಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತದಲ್ಲಿ ಶರಣಯ್ಯ (45) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ವೇಗವಾಗಿ ಚಲಿಸುತ್ತಿದ್ದ ಬಸ್ನ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ವಾಹನ ರಸ್ತೆಯಲ್ಲೇ ಉರುಳಿ ಬಿದ್ದಿದೆ. ಅಡ್ಡ ಬಿದ್ದಿದೆ.

ಬಸ್ಸಿನಲ್ಲಿದ್ದ ಬಹುತೇಕ ಪ್ರಯಾಣಿಕರು ಹೈದರಾಬಾದ್ ಮತ್ತು ಬಳ್ಳಾರಿ ಭಾಗದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಬಳಿಕ ಪೊಲೀಸರು ಹಾಗೂ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಕ್ರೇನ್ ಸಹಾಯದಿಂದ ಬಸ್ನ್ನು ತೆರವುಗೊಳಿಸಿ ವಾಹನ ಸಂಚಾರವನ್ನು ಪುನಃ ಸುಗಮಗೊಳಿಸಿದರು.

ಈ ಸಂಬಂಧ ಅಂಕೋಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande