
ಧಾರವಾಡ, 30 ಮೇ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶನಿವಾರ ನಿವೃತ್ತಿ ಹೊಂದಿದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಗೌರವಪೂರ್ವಕವಾಗಿ ಸನ್ಮಾನಿಸಿ, ನೆನಪಿನ ಕಾಣಿಕೆ ನೀಡಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಸೇವಾ ಅವಧಿಯಲ್ಲಿ ಸಲ್ಲಿಸಿದ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಇಲಾಖೆಗೆ ನೀಡಿದ ಕೊಡುಗೆಯನ್ನು ಸ್ಮರಿಸಿ ನಿವೃತ್ತ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಗೌರವಿಸಲಾಯಿತು. ಇದೇ ವೇಳೆ ಅವರ ಮುಂದಿನ ಜೀವನ ಸುಖ, ಶಾಂತಿ ಮತ್ತು ಆರೋಗ್ಯದಿಂದ ಕೂಡಿರಲಿ ಎಂದು ಶುಭ ಹಾರೈಸಲಾಯಿತು.
ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಅಧ್ಯಕ್ಷತೆ ವಹಿಸಿ ಮಾತನಾಡಿ, ನಿವೃತ್ತರಾಗುತ್ತಿರುವ ಸಿಬ್ಬಂದಿಯ ಸೇವೆಯನ್ನು ಪ್ರಶಂಸಿಸಿದರು. ಪೊಲೀಸ್ ಉಪಾಧೀಕ್ಷಕರು (ಸೈಬರ್), ಪೊಲೀಸ್ ಉಪಾಧೀಕ್ಷಕರು (ಗ್ರಾಮೀಣ), ಪೊಲೀಸ್ ಉಪಾಧೀಕ್ಷಕರು (ಡಿ.ಎ.ಆರ್.) ಸೇರಿದಂತೆ ಇಲಾಖೆಯ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.