
ಮೈಸೂರು, 30 ಮೇ (ಹಿ.ಸ.) :
ಆ್ಯಂಕರ್ : ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೈಸೂರು ಜಿಲ್ಲೆಯ ನಂಜನಗೂಡು ಉಪ ವಿಭಾಗದಲ್ಲಿ ಪೊಲೀಸ್ ಇಲಾಖೆ ವತಿಯಿಂದ ರೌಡಿ ಪೆರೇಡ್ ನಡೆಸಲಾಯಿತು.
ಈ ಸಂದರ್ಭದಲ್ಲಿ ರೌಡಿ ಪಟ್ಟಿಯಲ್ಲಿರುವ ವ್ಯಕ್ತಿಗಳನ್ನು ಹಾಜರುಪಡಿಸಿ, ಅವರ ಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ರೌಡಿ ಶೀಟರ್ಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು, ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಕೃತ್ಯಗಳಿಂದ ದೂರವಿರಬೇಕು ಹಾಗೂ ಕಾನೂನುಬದ್ಧವಾಗಿ ನಡೆದುಕೊಳ್ಳಬೇಕು ಎಂದು ಸೂಚಿಸಿದರು.
ಕಾನೂನು ಉಲ್ಲಂಘನೆ ಅಥವಾ ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಚಟುವಟಿಕೆಗಳಲ್ಲಿ ಭಾಗಿಯಾದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.