
ಬೆಂಗಳೂರು, 30 ಮೇ (ಹಿ.ಸ.) :
ಆ್ಯಂಕರ್ : ರೈಲ್ವೆ ಸೇತುವೆಯ ಸ್ಲ್ಯಾಬ್ ಬದಲಿ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಪುರಂ ಸಮೀಪದ ಲೋರಿ ಅಂಡರ್ ಬ್ರಿಡ್ಜ್ ನಲ್ಲಿ ಜೂನ್ 4ರಿಂದ 9ರವರೆಗೆ ವಿವಿಧ ಹಂತಗಳಲ್ಲಿ ತಾತ್ಕಾಲಿಕ ಸಂಚಾರ ನಿರ್ಬಂಧ ವಿಧಿಸಲಾಗಿರುವುದಾಗಿ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಕಾಮಗಾರಿ ಅವಧಿಯಲ್ಲಿ ಕೃಷ್ಣರಾಜಪುರಂ, ರಾಮಮೂರ್ತಿ ನಗರ, ಐಟಿಐ ಕಾಲೋನಿ ಹಾಗೂ ವೈಟ್ಫೀಲ್ಡ್ ಕಡೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.
ವಾಹನ ಸವಾರರು ಪರ್ಯಾಯವಾಗಿ ಕೆ.ಆರ್. ಪುರಂ ಕೇಬಲ್-ಸ್ಟೇಯ್ಡ್ ಸೇತುವೆ ಮಾರ್ಗವನ್ನು ಬಳಸುವಂತೆ ಸೂಚಿಸಲಾಗಿದೆ.
ಅಲ್ಲದೆ, ಕೆ.ಆರ್. ಪುರಂ–ಐಟಿಪಿಎಲ್ ಮುಖ್ಯ ರಸ್ತೆಯ ಒಂದು ಭಾಗದಲ್ಲಿ ಜೂನ್ 7ರ ಸಂಜೆ 6 ಗಂಟೆಯಿಂದ ಜೂನ್ 8ರ ಬೆಳಿಗ್ಗೆ 6 ಗಂಟೆಯವರೆಗೆ ವಿಶೇಷ ನಿರ್ಬಂಧ ಜಾರಿಯಲ್ಲಿರಲಿದ್ದು, ಈ ವೇಳೆ ಅಂಡರ್ ಬ್ರಿಡ್ಜ್ ಸಮೀಪ ಒದಗಿಸಲಾಗಿರುವ ಬದಲಿ ರಸ್ತೆಯ ಮೂಲಕ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಸಾರ್ವಜನಿಕರು ಕಾಮಗಾರಿ ಅವಧಿಯಲ್ಲಿ ಸಂಚಾರ ಸಲಹೆಗಳನ್ನು ಪಾಲಿಸಿ, ಪರ್ಯಾಯ ಮಾರ್ಗಗಳನ್ನು ಬಳಸುವ ಮೂಲಕ ಸಹಕರಿಸುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.