ಅಹಲ್ಯಾಬಾಯಿ ಹೋಳ್ಕರ್ ಜನ್ಮಜಯಂತಿ ; ಪ್ರಧಾನಿ ನಮನ
ನವದೆಹಲಿ, 31 ಮೇ (ಹಿ.ಸ.) : ಆ್ಯಂಕರ್ : ಲೋಕಮಾತೆ ಅಹಲ್ಯಾಬಾಯಿ ಹೋಳ್ಕರ್ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ಅಹಲ್ಯಾಬಾಯಿ ಹೋಳ್ಕರ್ ಅವರ ಬುದ್ಧಿವಂತಿಕೆ, ಕರುಣೆ ಹ
Pm


ನವದೆಹಲಿ, 31 ಮೇ (ಹಿ.ಸ.) :

ಆ್ಯಂಕರ್ : ಲೋಕಮಾತೆ ಅಹಲ್ಯಾಬಾಯಿ ಹೋಳ್ಕರ್ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ಅಹಲ್ಯಾಬಾಯಿ ಹೋಳ್ಕರ್ ಅವರ ಬುದ್ಧಿವಂತಿಕೆ, ಕರುಣೆ ಹಾಗೂ ಸಾರ್ವಜನಿಕ ಕಲ್ಯಾಣಕ್ಕಾಗಿ ಅವರು ತೋರಿದ ಅಚಲ ಬದ್ಧತೆಯನ್ನು ಇಡೀ ರಾಷ್ಟ್ರವು ಗೌರವ ಮತ್ತು ಭಕ್ತಿಯಿಂದ ಸ್ಮರಿಸುತ್ತದೆ ಎಂದು ಹೇಳಿದ್ದಾರೆ.

ಅವರ ಜೀವನವು ಉತ್ತಮ ಆಡಳಿತ, ದೇಶಭಕ್ತಿ ಮತ್ತು ಸಾಂಸ್ಕೃತಿಕ ಹೆಮ್ಮೆಯ ಅತ್ಯುತ್ತಮ ಮಾದರಿಯಾಗಿದೆ. ಅವರು ಯಾವಾಗಲೂ ಧೈರ್ಯ ಮತ್ತು ಸಮರ್ಪಣಾ ಮನೋಭಾವದಿಂದ ನಾಯಕತ್ವ ವಹಿಸಿದ್ದರು ಎಂದು ಪ್ರಧಾನಿ ಬಣ್ಣಿಸಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿರುವ ಪವಿತ್ರ ದೇವಾಲಯಗಳು ಹಾಗೂ ಯಾತ್ರಾ ಕ್ಷೇತ್ರಗಳ ಪುನರ್ನಿರ್ಮಾಣದಿಂದ ಹಿಡಿದು ಎಲ್ಲ ವರ್ಗದ ಜನರಿಗೆ ನ್ಯಾಯ ಮತ್ತು ಕಲ್ಯಾಣ ಒದಗಿಸುವ ಕಾರ್ಯದವರೆಗೆ ಅಹಲ್ಯಾಬಾಯಿ ಹೋಳ್ಕರ್ ಅವರು ಅಪೂರ್ವ ಕೊಡುಗೆಗಳನ್ನು ನೀಡಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಿ, ಅದನ್ನು ಮತ್ತಷ್ಟು ಬಲಪಡಿಸುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಸಮಾಜ ಸೇವೆ, ಸಂಸ್ಕೃತಿ ರಕ್ಷಣೆ ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಅವರು ಸಲ್ಲಿಸಿದ ಸೇವೆ ಪ್ರತಿಯೊಂದು ಪೀಳಿಗೆಗೂ ಸ್ಫೂರ್ತಿದಾಯಕವಾಗಿದೆ ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಅಹಲ್ಯಾಬಾಯಿ ಹೋಳ್ಕರ್ ಅವರ ಆದರ್ಶಗಳು ಇಂದಿಗೂ ಆಡಳಿತ, ಸಾಮಾಜಿಕ ನ್ಯಾಯ ಮತ್ತು ಜನಸೇವೆಯ ಮೌಲ್ಯಗಳನ್ನು ಪ್ರತಿಬಿಂಬಿಸುತ್ತಿದ್ದು, ದೇಶದ ಅಭಿವೃದ್ಧಿಗೆ ಮಾರ್ಗದರ್ಶಕ ಶಕ್ತಿಯಾಗಿ ಉಳಿದಿವೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande