
ಕೊಪ್ಪಳ, 31 ಮೇ (ಹಿ.ಸ.) :
ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯಿಂದ ಕುಷ್ಟಗಿ ತಾಲೂಕಿನ 2026-27ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕುಷ್ಟಗಿ ತಾಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಕುಷ್ಟಗಿ, ತಾವರಗೇರಾ, ದೋಟಿಹಾಳ, ಕಬ್ಬರಗಿ, ಮಾಲಗಿತ್ತಿ, ಹನುಮಸಾಗರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಸರಕಾರಿ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳಿಗೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳಲ್ಲಿ ಪ್ರಸಕ್ತ ಸಾಲಿನ ಪ್ರವೇಶ ಪ್ರಾರಂಭಿವಾಗಿದ್ದು, ಆಸಕ್ತ ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ವೆಬ್ಸೈಟ್ www.sw.kar.nic.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಎಸ್.ಎ.ಟಿ.ಎಸ್ ಐಡಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಆರ್.ಡಿ ಸಂಖ್ಯೆ), ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆಯೊಂದಿಗೆ ಆನ್ಲೈನ್ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಆನ್ಲೈನ್ ಅರ್ಜಿಯ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪ್ರತದ ದೃಢೀಕೃತ ಝೆರಾಕ್ಸ್ ಪ್ರತಿ, ಹಿಂದಿನ ತರಗತಿಯ ಅಂಕಪಟ್ಟಿಯ ದೃಢೀಕೃತ ಝೆರಾಕ್ಸ್ ಪ್ರತಿ, ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಕಾರ್ಡ್ ಝೆರಾಕ್ಸ್ ಪ್ರತಿ ಹಾಗೂ ವಿದ್ಯಾರ್ಥಿಯ ಪಾಸ್ ಪೋರ್ಟ್ ಸೈಜ್ 2 ಫೋಟೋಗಳೊಂದಿಗೆ ಅಗತ್ಯ ದಾಖಲೆಗಳನ್ನು ಆಯಾ ವಸತಿ ನಿಲಯಗಳಲ್ಲಿ ಅಥವಾ ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಕುಷ್ಟಗಿ ರವರ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಕುಷ್ಟಗಿ ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-2 ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್