ಮಹನೀಯರ ಜಯಂತಿಗೆ ಅಗತ್ಯ ಸಿದ್ಧತೆ : ಸಿದ್ರಾಮೇಶ್ವರ
ಕೊಪ್ಪಳ, 31 ಮೇ (ಹಿ.ಸ.) : ಆ್ಯಂಕರ್ : ಜಿಲ್ಲಾ ಕೇಂದ್ರದಲ್ಲಿ ಜೂನ್ ಮತ್ತು ಜುಲೈ ಮಾಹೆಯಲ್ಲಿ ನಡೆಯಲಿರುವ ಕೆಂಪೇಗೌಡ, ಡಾ. ಫ.ಗು ಹಳಕಟ್ಟಿ ಹಾಗೂ ಹಡಪದ ಅಪ್ಪಣ್ಣ, ಈ ಮೂರು ಮಹನೀಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು
Make necessary preparations for the Jayanti of the greats: Siddrameshwar


ಕೊಪ್ಪಳ, 31 ಮೇ (ಹಿ.ಸ.) :

ಆ್ಯಂಕರ್ : ಜಿಲ್ಲಾ ಕೇಂದ್ರದಲ್ಲಿ ಜೂನ್ ಮತ್ತು ಜುಲೈ ಮಾಹೆಯಲ್ಲಿ ನಡೆಯಲಿರುವ ಕೆಂಪೇಗೌಡ, ಡಾ. ಫ.ಗು ಹಳಕಟ್ಟಿ ಹಾಗೂ ಹಡಪದ ಅಪ್ಪಣ್ಣ, ಈ ಮೂರು ಮಹನೀಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆಂಪೇಗೌಡ, ಡಾ. ಫ.ಗು ಹಳಕಟ್ಟಿ ಹಾಗೂ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ ಕುರಿತು ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಾ. ಫ.ಗು ಹಳಕಟ್ಟಿ ಜಯಂತಿ: ಜಿಲ್ಲಾ ಮಟ್ಟದಲ್ಲಿ ಡಾ. ಫ.ಗು ಹಳಕಟ್ಟಿ ಜಯಂತಿಯನ್ನು ಜುಲೈ 2 ರಂದು ಹಮ್ಮಿಕೊಳ್ಳಲಾಗುವುದು. ಅಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳ ನಗರದ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾದಲ್ಲಿ ವೇದಿಕೆ ಸಮಾರಂಭದಲ್ಲಿ ಡಾ. ಫ.ಗು ಹಳಕಟ್ಟಿ ಭಾವಚಿತ್ರಕ್ಕೆ ಪೂಜೆ, ವಿಶೇಷ ಉಪನ್ಯಾಸ ಸೇರಿದಂತೆ ಇತರೆ ಕಾರ್ಯಕ್ರಮಗಳು ಜರುಗಲಿವೆ. ಈ ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಕುಷ್ಟಗಿ ರಸ್ತೆಯಲ್ಲಿರುವ ಡಾ. ಫ.ಗು ಹಳಕಟ್ಟಿ ವೃತ್ತದಲ್ಲಿ ಪುμÁ್ಪರ್ಚನೆ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು.

ಹಡಪದ ಅಪ್ಪಣ್ಣ ಜಯಂತಿ: ಕೊಪ್ಪಳ ಜಿಲ್ಲಾ ಮಟ್ಟದ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆಯನ್ನು ಜುಲೈ 29 ಆಯೋಜಿಸಲಾಗುವುದು. ಅಂದು ಬೆಳಿಗ್ಗೆ 8.30ಕ್ಕೆ ಹಡಪದ ಅಪ್ಪಣ್ಣನವರ ಭಾವಚಿತ್ರದ ಮೇರವಣಿಗೆಯು ನಗರದ ಗಡಿಯಾರ ಕಂಬದ ಹತ್ತಿರವಿರುವ ಅಕ್ಕಮಹಾದೇವಿ ದೇವಸ್ಥಾನದ ಆವರಣದಿಂದ ಆರಂಭಗೊಂಡು ಸಾಹಿತ್ಯ ಭವನದವರೆಗೆ ಜರುಗಲಿದೆ. ಬಳಿಕ 10.30 ಗಂಟೆಗೆ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪೂಜೆ, ಹಡಪದ ಅಪ್ಪಣ್ಣನವರ ಕುರಿತು ವಿಶೇಷ ಉಪನ್ಯಾಸ ಹಾಗೂ ಇತರೆ ಕಾರ್ಯಕ್ರಮಗಳು ನಡೆಯಲಿದೆ ಎಂದರು.

ಡಾ. ಫ.ಗು ಹಳಕಟ್ಟಿ ಹಾಗೂ ಹಡಪದ ಅಪ್ಪಣ್ಣನವರ ಜಯಂತಿ ಸಮಾರಂಭಗಳ ದಿನದಂದು, ಕಾರ್ಯಕ್ರಮ ನಡೆಯುವ ಸ್ಥಳಗಳು, ಡಾ. ಫ.ಗು ಹಳಕಟ್ಟಿ ವೃತ್ತ ಮತ್ತು ಹಡಪದ ಅಪ್ಪಣ್ಣನವರ ಮೆರವಣಿಗೆ ಸಾಗಿ ಬರುವ ರಸ್ತೆ ಸ್ವಚ್ಛತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮೆರವಣಿಗೆಯಲ್ಲಿ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಜಯಂತಿ ದಿನದಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು, ಗ್ರಾಮ ಪಂಚಾಯತ್ ಮತ್ತು ಇತರೆ ಕಛೇರಿಗಳಲ್ಲಿ ಈ ಮಹನೀಯರ ಜಯಂತಿ ಆಚರಿಸುವಂತಾಗಬೇಕು. ಜಿಲ್ಲಾ ಮಟ್ಟದ ಜಯಂತಿ ಆಚರಣೆ ಕಾರ್ಯಕ್ರಮಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆಂಪೇಗೌಡ ಜಯಂತಿಯನ್ನು ಜೂನ್ 27 ರಂದು ಸರಳವಾಗಿ ಆಚರಿಸುವ ಕುರಿತು ಸಭೆಯಲ್ಲಿ ನಿರ್ಧರಿಸಲಾಯಿತು. ಅಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಅವರಿಗೆ ಗೌರವ ನಮನ ಸಲ್ಲಿಸಬೇಕು. ಈ ಕಾರ್ಯಕ್ರಮಕ್ಕೂ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕೆಂದರು.

ಮಹನೀಯರ ಜಯಂತಿ ಕಾರ್ಯಕ್ರಮಗಳ ಯಶಸ್ವಿಗೆ ವಿವಿಧ ಸಮಾಜದ ಮುಖಂಡರು, ಸಾರ್ವಜನಿಕರು ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕರ್ಣಕುಮಾರ್, ಬಸವ ಅನುಯಾಯಿಗಳಾದ ಬಸವರಾಜ ಬಳ್ಳೊಳ್ಳಿ, ಬಸವಶ್ರೀ ಬಿ. ಸೋಮನಾಳ, ಹನುಮೇಶ ಕಲ್ಮಗಿ, ಮಹಾಂತೇಶ ಮಲ್ಲನಗೌಡ್ರು, ವೀರಣ್ಣ, ಸತೀಶ್ ಮಂಗಳೂರು, ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾಧ್ಯಕ್ಷರಾದ ಮೌನೇಶ್, ಉಪಾಧ್ಯಕ್ಷರಾದ ಫಕೀರಪ್ಪ, ಗೌರವ ಅಧ್ಯಕ್ಷರಾದ ಮಂಜುನಾಥ ಹಾಂದ್ರಾಳ, ಮುಖಂಡರಾದ ದ್ಯಾಮಣ್ಣ, ಫಕೀರೇಶ ಹಾಂದ್ರಾಳ, ಬಸವರಾಜ ಇಟ್ಟಗಿ, ಮುತ್ತಣ್ಣ ಮಾದನೂರು, ಗಣೇಶ್ ಹಂಚಿನಾಳ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಗಳು, ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande