
ಧರ್ಮಸ್ಥಳ, 31 ಮೇ (ಹಿ.ಸ.) :
ಆ್ಯಂಕರ್ : ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಧರ್ಮಸ್ಥಳಕ್ಕೆ ಆಗಮಿಸಿದ ಉಪರಾಷ್ಟ್ರಪತಿಯನ್ನು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಕ್ಷೇತ್ರದ ಪ್ರಮುಖರು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಅವರು ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ, ದೇಶದ ಸುಖ-ಶಾಂತಿ, ಸಮೃದ್ಧಿ ಹಾಗೂ ಜನರ ಒಳಿತಿಗಾಗಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸೇವಾ ಚಟುವಟಿಕೆಗಳ ಕುರಿತು ಉಪರಾಷ್ಟ್ರಪತಿಗೆ ಮಾಹಿತಿ ನೀಡಲಾಯಿತು. ಕ್ಷೇತ್ರದ ವತಿಯಿಂದ ಸ್ಮರಣಿಕೆ ಹಾಗೂ ಪ್ರಸಾದ ನೀಡಿ ಅವರನ್ನು ಸನ್ಮಾನಿಸಲಾಯಿತು.
ಉಪರಾಷ್ಟ್ರಪತಿಯವರ ಭೇಟಿ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ವಿಶೇಷ ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು.
ಹಿಂದೂಸ್ತಾನ್ ಸಮಾಚಾರ್ / Rakesh.M.B.