ನಾಯಿ ಕಡಿತಕ್ಕೊಳಗಾದ ಬಾಲಕನ ಭೇಟಿ ; ಹಾವಳಿ ತಡೆಗೆ ಡಿಸಿ ಕಟ್ಟುನಿಟ್ಟಿನ ಸೂಚನೆ
ವಿಜಯಪುರ, 06 ಮೇ (ಹಿ.ಸ.) : ಆಂಕರ್ : ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 35ರ ಫೇವರಚಂದ ಕಾಲೊನಿಯ ರಾಜಕುಮಾರ ಲೇಔಟ್ನಲ್ಲಿ ನಾಯಿ ಕಡಿತಕ್ಕೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 3 ವರ್ಷದ ಬಾಲಕ ವಿರಾಜ್ ಸಂತೋಷ ಬಿರಾದಾರ ಅವರನ್ನು ಜಿಲ್ಲಾಧಿಕಾರಿ ಡಾ. ಆನಂದ ಕೆ
ಹಾವಳಿ


ವಿಜಯಪುರ, 06 ಮೇ (ಹಿ.ಸ.) :

ಆಂಕರ್ : ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 35ರ ಫೇವರಚಂದ ಕಾಲೊನಿಯ ರಾಜಕುಮಾರ ಲೇಔಟ್ನಲ್ಲಿ ನಾಯಿ ಕಡಿತಕ್ಕೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 3 ವರ್ಷದ ಬಾಲಕ ವಿರಾಜ್ ಸಂತೋಷ ಬಿರಾದಾರ ಅವರನ್ನು ಜಿಲ್ಲಾಧಿಕಾರಿ ಡಾ. ಆನಂದ ಕೆ. ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ಘಟನೆಯಲ್ಲಿ ಗಾಯಗೊಂಡ ಬಾಲಕನಿಗೆ ತಕ್ಷಣವೇ ಚಿಕಿತ್ಸೆ ನೀಡಲಾಗಿದ್ದು, ಜಿಲ್ಲಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಗು ಔಷಧಿಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಚೇತರಿಸಿಕೊಂಡು ಮಾತನಾಡುತ್ತಿದ್ದಾನೆ. ಪೋಷಕರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

ಬಾಲಕನಿಗೆ ರೇಬೀಸ್ ವಿರೋಧಿ ಲಸಿಕೆಗಳನ್ನು ನೀಡಲಾಗುತ್ತಿದ್ದು, ಜಿಲ್ಲಾಸ್ಪತ್ರೆಯಿಂದಲೂ ಅಗತ್ಯ ಲಸಿಕೆ ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಆಸ್ಪತ್ರೆ ಭೇಟಿ ನೀಡಿ ಸಮರ್ಪಕ ಸ್ಪಂದನೆ ನೀಡಿರುವುದನ್ನು ಅವರು ಶ್ಲಾಘಿಸಿದರು.

ಈ ವೇಳೆ ಬೀದಿ ನಾಯಿ ಹಾವಳಿ ಕುರಿತು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿಗಳು, ರಾಜಕುಮಾರ ಲೇಔಟ್ ಸೇರಿದಂತೆ ನಗರದಲ್ಲಿನ ಸಮಸ್ಯೆ ಪ್ರದೇಶಗಳಲ್ಲಿ ನಾಯಿಗಳನ್ನು ಹಿಡಿದು ಪುನರ್ ವ್ಯವಸ್ಥೆ (ಡಾಗ್ ಶೆಲ್ಟರ್) ಮಾಡಲು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ತಕ್ಷಣ ಜಾರಿಗೆ ತರಬೇಕು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ರಾಜು ಕುರಿಯವರ, ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಖಾಸಗಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ಪಾಲಿಕೆ ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande