ಅಧಿಕಾರಿಯ ಕಾರ್ಯವೈಖರಿ ವಿರೋಧಿಸಿ ರೈತ ಸಂಘ ಮನವಿ ; ಕ್ರಮಕ್ಕೆ ಒತ್ತಾಯ
ವಿಜಯಪುರ, 06 ಮೇ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸಮೀಪದ ರಾಂಪುರದಲ್ಲಿರುವ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ ಕಚೇರಿಯಲ್ಲಿನ ಅಧಿಕಾರಿ ರಾಘವೇಂದ್ರ ಅವರ ಕಾರ್ಯವೈಖರಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ರೈತ ಸಂಘ ಹಾಗೂ ಹಸಿರು
ರೈತರು


ವಿಜಯಪುರ, 06 ಮೇ (ಹಿ.ಸ.) :

ಆಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸಮೀಪದ ರಾಂಪುರದಲ್ಲಿರುವ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ ಕಚೇರಿಯಲ್ಲಿನ ಅಧಿಕಾರಿ ರಾಘವೇಂದ್ರ ಅವರ ಕಾರ್ಯವೈಖರಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಮುಖ್ಯ ಇಂಜಿನಿಯರ್ ಅವರಿಗೆ ಮನವಿ ಸಲ್ಲಿಸಿದರು.

ರೈತ ಸಂಘದ ಪದಾಧಿಕಾರಿಗಳು ಅಧಿಕಾರಿಯ ವರ್ತನೆ ಹಾಗೂ ಕಾರ್ಯಪದ್ಧತಿಗಳ ಬಗ್ಗೆ ಹಲವು ಆರೋಪಗಳನ್ನು ಮುಂದಿಟ್ಟಿದ್ದು, ಇದರಿಂದ ಸ್ಥಳೀಯ ರೈತರಿಗೆ ತೊಂದರೆ ಉಂಟಾಗುತ್ತಿದೆ ಎಂದು ದೂರಿದರು. ಜಲಸಂಪನ್ಮೂಲ ಸಂಬಂಧಿತ ಕಾರ್ಯಗಳಲ್ಲಿ ವಿಳಂಬ, ಸಮರ್ಪಕ ಮಾಹಿತಿ ಕೊರತೆ ಹಾಗೂ ರೈತರ ಸಮಸ್ಯೆಗಳಿಗೆ ಸ್ಪಂದನೆಯ ಅಭಾವ ಇದೆ ಎಂದು ಅವರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ರೈತ ಮುಖಂಡರಾದ ಸುನೀಲ ಜಾಬಾನೂರ, ಯೂನಸ್ ತಾಂಬೋಳಿ, ಮಶಾಖ ವಾಲೀಕಾರ, ಶಿವಕುಮಾರ ಬಿರಾದಾರ, ಮಲ್ಲಿಕಾರ್ಜುನ ಹಿರೇಕುರುಬರ ಸೇರಿದಂತೆ ಹಲವರು ಮನವಿ ಸಲ್ಲಿಸಿ, ತಕ್ಷಣವೇ ವಿಚಾರಣೆ ನಡೆಸಿ ನ್ಯಾಯಸಮ್ಮತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ರೈತರಿಗೆ ಆಗುತ್ತಿರುವ ಅನಾನುಕೂಲತೆಗಳನ್ನು ಗಮನದಲ್ಲಿಟ್ಟುಕೊಂಡು, ಸಂಬಂಧಿಸಿದ ಅಧಿಕಾರಿಗಳ ಜವಾಬ್ದಾರಿಯನ್ನು ಖಚಿತಪಡಿಸಬೇಕೆಂದು ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ಮುಖಂಡರು, ಕೃಷಿ ಮತ್ತು ನೀರಾವರಿ ಸಂಬಂಧಿತ ಸಮಸ್ಯೆಗಳು ರೈತರ ಜೀವನಕ್ಕೆ ನೇರವಾಗಿ ಸಂಬಂಧಿಸಿದವುಗಳಾಗಿದ್ದು, ಇಂತಹ ಸಮಸ್ಯೆಗಳ ಪರಿಹಾರದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಸಹಿಸಲಾಗದು ಎಂದು ಹೇಳಿದರು. ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದರು.

ಮನವಿ ಸ್ವೀಕರಿಸಿದ ಮುಖ್ಯ ಇಂಜಿನಿಯರ್ ಅವರು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು. ಘಟನೆಗೆ ಸಂಬಂಧಿಸಿದಂತೆ ಮುಂದಿನ ಕ್ರಮಗಳ ಬಗ್ಗೆ ರೈತ ಸಂಘ ಕಾದು ನೋಡುತ್ತದ ಎಂದು ಎಚ್ಚರಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande