ಮಲಕನದೇವರ ಹಟ್ಟಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ; ₹1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ
ವಿಜಯಪುರ, 06 ಮೇ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಸೋಮದೇವರ ಹಟ್ಟಿಯಿಂದ ಮಲಕನದೇವರ ಹಟ್ಟಿ ಗ್ರಾಮದವರೆಗೆ ಸುಮಾರು 1.10 ಕಿಲೋಮೀಟರ್ ಉದ್ದದ ರಸ್ತೆಯನ್ನು ನಿರ್ಮಿಸುವ ಕಾಮಗಾರಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಭೂಮಿ ಪೂಜೆ ನೆರವೇರಿಸಿದರು. ಸುಮ
ಸಚಿವ


ವಿಜಯಪುರ, 06 ಮೇ (ಹಿ.ಸ.) :

ಆಂಕರ್ : ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಸೋಮದೇವರ ಹಟ್ಟಿಯಿಂದ ಮಲಕನದೇವರ ಹಟ್ಟಿ ಗ್ರಾಮದವರೆಗೆ ಸುಮಾರು 1.10 ಕಿಲೋಮೀಟರ್ ಉದ್ದದ ರಸ್ತೆಯನ್ನು ನಿರ್ಮಿಸುವ ಕಾಮಗಾರಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಭೂಮಿ ಪೂಜೆ ನೆರವೇರಿಸಿದರು.

ಸುಮಾರು ₹1 ಕೋಟಿ ವೆಚ್ಚದಲ್ಲಿ ಈ ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗುತ್ತಿದ್ದು, ಗ್ರಾಮೀಣ ಪ್ರದೇಶದ ಸಂಪರ್ಕ ವ್ಯವಸ್ಥೆಗೆ ಇದು ಮಹತ್ವದ ಕೊಡುಗೆಯಾಗಲಿದೆ.

ಗ್ರಾಮದ ಹಿರಿಯರು, ಮುಖಂಡರು ಹಾಗೂ ತಾಯಂದಿರ ಸಮ್ಮುಖದಲ್ಲಿ ಮಲಕನದೇವರ ಹಟ್ಟಿ ಗ್ರಾಮದಲ್ಲಿ ಪೂಜಾ ವಿಧಿವಿಧಾನಗಳೊಂದಿಗೆ ಭೂಮಿಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯರು ಸಂತಸ ವ್ಯಕ್ತಪಡಿಸಿ, ದೀರ್ಘಕಾಲದ ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಉತ್ತಮ ರಸ್ತೆ ಸೌಲಭ್ಯವು ಗ್ರಾಮೀಣ ಅಭಿವೃದ್ಧಿಗೆ ಅತ್ಯಂತ ಅಗತ್ಯವಾಗಿದ್ದು, ಕೃಷಿ ಚಟುವಟಿಕೆಗಳು, ಶಿಕ್ಷಣ ಮತ್ತು ಆರೋಗ್ಯ ಸೇವೆಗಳಿಗೆ ಸುಗಮ ಸಂಪರ್ಕ ಒದಗಿಸುತ್ತದೆ ಎಂದು ಹೇಳಿದರು. ಈ ಕಾಮಗಾರಿಯಿಂದ ಸಾರ್ವಜನಿಕರ ಸಂಚಾರ ಸುಲಭವಾಗಲಿದ್ದು, ಸ್ಥಳೀಯರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಇನ್ನು ಕೆಲವೇ ದಿನಗಳಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣ ಪೂರ್ಣಗೊಂಡು ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಮಗಾರಿಯನ್ನು ಸಮಯಕ್ಕೆ ಸರಿಯಾಗಿ ಹಾಗೂ ಉತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಇಲಾಖೆಗೆ ಸೂಚಿಸಲಾಗಿದೆ.

ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande