
ಕೋಲಾರ, ೦೬ ಮೇ (ಹಿ.ಸ) :
ಆ್ಯಂಕರ್ : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದ ವಿಧಾನ ಪರಿಷತ್ ಸದಸ್ಯ ನಸೀರ್ ಅಹಮದ್ ವಿರುದ್ಧ ಕೈಗೊಳ್ಳಲಾಗಿರುವ ಕ್ರಮದ ಬಗ್ಗೆ ಪ್ರತಿಕ್ರಿಯಿಸಲು ಕೆಜಿಎಫ್ ಶಾಸಕಿ ರೂಪ ಶಶಿಧರ್ ನಿರಾಕರಿಸಿದರು.
ವಿಧಾನ ಪರಿಷತ್ ಸದಸ್ಯರಾದ ನಸೀರ್ ಆಹಮದ್ ಅವರು ಕಾಂಗ್ರೇಸ್ ಪಕ್ಷದಲ್ಲಿ ಹಿರಿಯ ನಾಯಕರು. ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಒಳ್ಳೆಯ ಒಡನಾಟವನ್ನು ಹೊಂದಿದ್ದಾರೆ. ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ, ಈ ಹಿಂದೆ ಸಚಿವರಾಗಿಯೂ ಕೆಲಸ ನಿರ್ವಹಿಸಿದ್ದರು. ಅವರ ಬಗ್ಗೆ ಕಾಂಗ್ರೇಸ್ ಪಕ್ಷದಲ್ಲಿ ಹೆಚ್ಚಿನ ಗೌರವ ಇದೆ. ಅವರಿಗೆ ದಾವಣಗೆರೆ ಚುನಾವಣೆಯಲ್ಲಿ ಹೆಚ್ಚಿನ ಜವಾಬ್ದಾರಿಯನ್ನು ನೀಡಲಾಗಿತ್ತು. ಅವರು ಮೂಲತಹ ನನ್ನ ಕ್ಷೇತ್ರದ ಹಿರಿಯರು ಅವರ ಬಗ್ಗೆ ಅಪಾರವಾದ ಗೌರವಿದೆ ಎಂದರು.
ನಸೀರ್ ಅಹಮದ್ ವಿಷಯದಲ್ಲಿ ಪಕ್ಷ ಕೈಗೊಂಡಿರುವ ಕ್ರಮದ ನಾನು ಮಾತನಾಡುವುದಿಲ್ಲ. ಆ ಅಧಿಕಾರವು ನನಗೆ ಇಲ್ಲ. ಹಾಗಾಗಿ ಈ ವಿಚಾರವಾಗಿ ನಾನು ಪ್ರತಿಕ್ರಿಯಿಸುವುದಿಲ್ಲ. ಅದೆಲ್ಲವನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಕೋಲಾರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಕೆಜಿಎಫ್ ಶಾಸಕಿ ರೂಪಾ ಶಶಿಧರ್ ಉತ್ತರಿಸಿದರು.
ಡಿಸಿಸಿ ಬ್ಯಾಂಕ್ ವಿಶೇಷವಾಗಿ ಮಹಿಳೆಯರ ಮತ್ತು ರೈತರ ಕಷ್ಟಗಳಿಗೆ ಸ್ಪಂದಿಸಿ ಸಹಾಯ ಮಾಡಿದೆ ಡಿ.ಸಿ.ಸಿ. ಬ್ಯಾಂಕ್ ಬಡವರ ಪಾಲಿಗೆ ದೇಗುಲವಾಗಿತ್ತು. ನಮಗೆ ರಾಜಕಾರಣ ಬೇಕಾಗಿಲ್ಲ ನಮಗೆ ಡಿಸಿಸಿ ಬ್ಯಾಂಕ್ ಮಹಿಳೆಯರ ಸ್ವಾವಲಂಭಿ ಬದುಕಿಗೆ ಆಸರೆಯಾಗಿ ಶಕ್ತಿ ತುಂಬಿದ ದೇವರಾಗಿತ್ತು ಎಂಬ ಭಾವನೆಯಿದೆ. ಡಿಸಿಸಿ ಬ್ಯಾಂಕ್ ಬೆಳೆಯ ಬೇಕು. ಅಭಿವೃದ್ದಿಯಾಗ ಬೇಕು, ಈ ಮೊದಲಿನಂತೆ ಸಧೃಡವಾಗಬೇಕು ಎಂಬುದು ನನ್ನ ಅಭಿಲಾಷೆಯಾಗಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್