
ಬಾಗಲಕೋಟೆ, 06 ಮೇ (ಹಿ.ಸ.) :
ಆಂಕರ್ : ಬಾಗಲಕೋಟೆ ಜಿಲ್ಲೆಯ ತೇರದಾಳ ಶಾಸಕ ಸಿದ್ದು ಸವದಿ ರಬಕವಿ-ಬನಹಟ್ಟಿ ಮತಕ್ಷೇತ್ರದ ರಬಕವಿ-ಬನಹಟ್ಟಿ ನಗರದ ಅಗ್ನಿಶಾಮಕ ಠಾಣೆಗೆ ನೂತನವಾಗಿ ಬಂದ ಜಲವಾಹನವನ್ನು ಇಂದು ಸಾರ್ವಜನಿಕ ಸೇವೆಗೆ ಚಾಲನೆ ನೀಡಿದರು. ಈ ನೂತನ ವಾಹನದಿಂದ ಅಗ್ನಿ ಅವಘಡಗಳ ಸಂದರ್ಭದಲ್ಲಿ ತ್ವರಿತ ಹಾಗೂ ಪರಿಣಾಮಕಾರಿ ಸೇವೆ ಒದಗಿಸಲು ಸಾಧ್ಯವಾಗಲಿದೆ.
ಕಾರ್ಯಕ್ರಮದಲ್ಲಿ ಗಣ್ಯರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಜಲವಾಹನವನ್ನು ಪೂಜಾ ವಿಧಿವಿಧಾನಗಳೊಂದಿಗೆ ಉದ್ಘಾಟಿಸಿ ಕಾರ್ಯಾಚರಣೆಗೆ ಬಿಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದವರು, ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಗ್ನಿ ಅವಘಡಗಳ ಸಂಖ್ಯೆಯನ್ನು ಗಮನಿಸಿ ಈ ರೀತಿಯ ಆಧುನಿಕ ಸೌಲಭ್ಯಗಳು ಅತ್ಯಂತ ಅಗತ್ಯವಾಗಿವೆ ಎಂದು ಹೇಳಿದರು.
ನೂತನ ಜಲವಾಹನವು ಹೆಚ್ಚಿನ ಸಾಮರ್ಥ್ಯದ ನೀರಿನ ಸಂಗ್ರಹಣಾ ವ್ಯವಸ್ಥೆಯನ್ನು ಹೊಂದಿದ್ದು, ಅಗ್ನಿ ನಂದಿಸಲು ತ್ವರಿತವಾಗಿ ಕಾರ್ಯನಿರ್ವಹಿಸಲಿದೆ. ಇದರಿಂದ ತುರ್ತು ಪರಿಸ್ಥಿತಿಗಳಲ್ಲಿ ಪ್ರತಿಕ್ರಿಯೆ ಸಮಯ ಕಡಿಮೆಯಾಗುವ ಜೊತೆಗೆ ಸಾರ್ವಜನಿಕರ ಜೀವ ಹಾಗೂ ಆಸ್ತಿಪಾಸ್ತಿಯನ್ನು ರಕ್ಷಿಸಲು ನೆರವಾಗಲಿದೆ.
ಸ್ಥಳೀಯರು ಈ ನೂತನ ಸೌಲಭ್ಯಕ್ಕೆ ಸಂತಸ ವ್ಯಕ್ತಪಡಿಸಿ, ಅಗ್ನಿಶಾಮಕ ಸಿಬ್ಬಂದಿಯ ಸೇವೆಯನ್ನು ಶ್ಲಾಘಿಸಿದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಸೌಲಭ್ಯಗಳನ್ನು ಒದಗಿಸುವಂತೆ ಸಾರ್ವಜನಿಕರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಅಗ್ನಿಶಾಮಕ ಇಲಾಖೆ ಸಿಬ್ಬಂದಿ, ನಗರಸಭೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಈ ನೂತನ ಜಲವಾಹನ ಸೇವೆ ಆರಂಭವು ನಗರಕ್ಕೆ ಮಹತ್ವದ ಹೆಜ್ಜೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಹಿಂದೂಸ್ತಾನ್ ಸಮಾಚಾರ್ / jyothi deshpande