ರಾಜ್ಯದಲ್ಲಿ ಮುಂದಿನ 7 ದಿನ ಬಿಸಿಲು, ಗುಡುಗು–ಮಳೆ ಎಚ್ಚರಿಕೆ
ಬೆಂಗಳೂರು, 06 ಮೇ (ಹಿ.ಸ.) : ಆ್ಯಂಕರ್ : ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಮುಂದಿನ ಏಳು ದಿನಗಳ ಕಾಲ ರಾಜ್ಯದಾದ್ಯಂತ ಸಾಮಾನ್ಯವಾಗಿ ಒಣ ಹವೆ ಮತ್ತು ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಆದರೆ ಮಧ್ಯಾಹ್ನ ನಂತರ ಹಲವೆಡೆ ಮೋಡ ಕವಿದ ವಾತಾವರಣ ಕಂಡುಬರುವ ನಿರೀಕ್ಷೆಯಿದೆ. ರಾಜ
Imd


ಬೆಂಗಳೂರು, 06 ಮೇ (ಹಿ.ಸ.) :

ಆ್ಯಂಕರ್ : ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಮುಂದಿನ ಏಳು ದಿನಗಳ ಕಾಲ ರಾಜ್ಯದಾದ್ಯಂತ ಸಾಮಾನ್ಯವಾಗಿ ಒಣ ಹವೆ ಮತ್ತು ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಆದರೆ ಮಧ್ಯಾಹ್ನ ನಂತರ ಹಲವೆಡೆ ಮೋಡ ಕವಿದ ವಾತಾವರಣ ಕಂಡುಬರುವ ನಿರೀಕ್ಷೆಯಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು–ಸಿಡಿಲು ಸಹಿತ ಜೋರಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮೇ 7ರಿಂದ 9ರವರೆಗೆ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಸ್ಥಳೀಯ ಆಡಳಿತ ಮತ್ತು ನಾಗರಿಕರು ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande