ಸೂಡಿಯಲ್ಲಿ ಅದ್ದೂರಿ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ನೂತನ ರಥ ಲೋಕಾರ್ಪಣೆ
ಗದಗ, 07 ಮೇ (ಹಿ.ಸ.): ಆ್ಯಂಕರ್:ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದಲ್ಲಿ ವೀರಶೈವ ಧರ್ಮಪೀಠದ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ 50ನೇ ವರ್ಷದ ರಥೋತ್ಸವದ ಅಂಗವಾಗಿ ನೂತನ ರಥ ಲೋಕಾರ್ಪಣೆ ಮತ್ತು ಧರ್ಮ ಸಮಾರಂಭ ಭಕ್ತಿಭಾವ ಹಾಗೂ ವೈಭವದಿಂದ ನೆರವೇರಿತು. ಕಾರ್ಯಕ್ರಮದಲ್ಲಿ ಕರ್ನಾಟ
ಸೂಡಿಯಲ್ಲಿ ಅದ್ದೂರಿ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ನೂತನ ರಥ ಲೋಕಾರ್ಪಣೆ


ಗದಗ, 07 ಮೇ (ಹಿ.ಸ.):

ಆ್ಯಂಕರ್:ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದಲ್ಲಿ ವೀರಶೈವ ಧರ್ಮಪೀಠದ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ 50ನೇ ವರ್ಷದ ರಥೋತ್ಸವದ ಅಂಗವಾಗಿ ನೂತನ ರಥ ಲೋಕಾರ್ಪಣೆ ಮತ್ತು ಧರ್ಮ ಸಮಾರಂಭ ಭಕ್ತಿಭಾವ ಹಾಗೂ ವೈಭವದಿಂದ ನೆರವೇರಿತು.

ಕಾರ್ಯಕ್ರಮದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಭಾಗವಹಿಸಿ ಮಾತನಾಡಿದರು. ಧಾರ್ಮಿಕ ಮೌಲ್ಯಗಳು, ಸಂಸ್ಕೃತಿ ಮತ್ತು ಸಮಾಜದ ಏಕತೆಯನ್ನು ಉಳಿಸುವಲ್ಲಿ ಮಠ-ಮಂದಿರಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ಹೇಳಿದರು. ಇಂತಹ ಧಾರ್ಮಿಕ ಸಮಾರಂಭಗಳು ಸಮಾಜದಲ್ಲಿ ಆಧ್ಯಾತ್ಮಿಕ ಚೇತನೆಯನ್ನು ಹೆಚ್ಚಿಸುವುದರ ಜೊತೆಗೆ ಪರಂಪರೆಯ ಉಳಿವಿಗೂ ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು.

ಸಮಾರಂಭದಲ್ಲಿ ಶ್ರೀ ಷ.ಬ್ರ ಡಾ. ಕೊಟ್ಟೂರ ಬಸವೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಜುಕ್ತಿಹಿರೇಮಠ, ಸೂಡಿ, ಶ್ರೀ ಷ.ಬ್ರ ವಿರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಹಿರೇಮಠ, ಹಿರೇವಡ್ಡಟ್ಟಿ, ಶ್ರೀ ಷ.ಬ್ರ ಶಿವಸಿದ್ದರಾಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಪಂಚಗ್ರಹ ಹಿರೇಮಠ, ಸುಳ್ಯ, ಶ್ರೀ ಷ.ಬ್ರ ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು, ಮದ್ದಾನಿ ಹಿರೇಮಠ, ಕುಷ್ಟಗಿ ಹಾಗೂ ಶ್ರೀ ಮ.ನಿ.ಪ್ರ ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಟೆಂಗಿನಮಠ, ಬಾಗಲಕೋಟೆ ಸೇರಿದಂತೆ ಹಲವು ಗಣ್ಯರು ಸಾನಿಧ್ಯ ವಹಿಸಿದ್ದರು.

ಇದೇ ವೇಳೆ ಡಾ. ಈ. ಭೀಮೇಶ್ವರ ಜೋಶಿ, ಧರ್ಮಕರ್ತರು ಹಾಗೂ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಹೊರನಾಡು ಶ್ರೀಗಳವರ ಉಪಸ್ಥಿತಿಯೂ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದಿತು.

ಶಾಸಕರಾದ ಜಿ.ಎಸ್. ಪಾಟೀಲ್, ಮಾಜಿ ಶಾಸಕ ಕಳಕಪ್ಪ ಬಂಡಿ, ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ರಾಜು ಕುರಡಗಿ, ರೋಣ ಮಂಡಳದ ಅಧ್ಯಕ್ಷ ಉಮೇಶ ಮಲ್ಲಾಪೂರ ಸೇರಿದಂತೆ ಹಲವು ರಾಜಕೀಯ ಹಾಗೂ ಸಾಮಾಜಿಕ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಾವಿರಾರು ಭಕ್ತರು ಸಮಾರಂಭದಲ್ಲಿ ಪಾಲ್ಗೊಂಡು ಜಗದ್ಗುರುಗಳ ಆಶೀರ್ವಾದ ಪಡೆದು ನೂತನ ರಥೋತ್ಸವವನ್ನು ಕಣ್ತುಂಬಿಕೊಂಡರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande