ಚಿತ್ರದುರ್ಗದಲ್ಲಿ ಮೇ 9ಕ್ಕೆ ಬಿ.ಎಸ್.ವೈ ಅಭಿಮಾನೋತ್ಸವ
ವಿಜಯಪುರ, 07 ಮೇ (ಹಿ.ಸ.) : ಆಂಕರ್ : ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಯಡಿಯೂರಪ್ಪ ಅವರ ಐವತ್ತು ವರ್ಷಗಳ ರಾಜಕೀಯ ಪಯಣವನ್ನು ಸ್ಮರಣೀಯವಾಗಿಸಲು ಮೇ 9ರಂದು ಚಿತ್ರದುರ್ಗದಲ್ಲಿ ಅದ್ದೂರಿ “ಬಿ.ಎಸ್.ವೈ ಅಭಿಮಾನೋತ್ಸವ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಎ ಎಸ್ ಪಾಟೀಲ್ ನಡಹ
ನಡಹಳ್ಳಿ


ವಿಜಯಪುರ, 07 ಮೇ (ಹಿ.ಸ.) :

ಆಂಕರ್ : ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಯಡಿಯೂರಪ್ಪ ಅವರ ಐವತ್ತು ವರ್ಷಗಳ ರಾಜಕೀಯ ಪಯಣವನ್ನು ಸ್ಮರಣೀಯವಾಗಿಸಲು ಮೇ 9ರಂದು ಚಿತ್ರದುರ್ಗದಲ್ಲಿ ಅದ್ದೂರಿ “ಬಿ.ಎಸ್.ವೈ ಅಭಿಮಾನೋತ್ಸವ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ತಿಳಿಸಿದರು.

ಈ ಕುರಿತು ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ರೈತಪರ ನಾಯಕತ್ವ, ಸಂಘಟನೆ ಸಾಮರ್ಥ್ಯ ಹಾಗೂ ಜನಸಾಮಾನ್ಯರೊಂದಿಗೆ ಬೆಸೆದುಕೊಂಡ ರಾಜಕೀಯ ಜೀವನದ ಮೂಲಕ ವಿಶಿಷ್ಟ ಛಾಪು ಮೂಡಿಸಿರುವ ಯಡಿಯೂರಪ್ಪ ಅವರ ರಾಜಕೀಯ ಸೇವೆಗೆ ಗೌರವ ಸೂಚಿಸುವ ಉದ್ದೇಶದಿಂದ ಈ ಅಭಿಮಾನೋತ್ಸವ ಆಯೋಜಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು, ರೈತ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಪಕ್ಷಗಳ ನಾಯಕರು ಭಾಗವಹಿಸಲಿದ್ದಾರೆ.

ಪಕ್ಷಾತೀತವಾಗಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಯಡಿಯೂರಪ್ಪ ಅವರ ರಾಜಕೀಯ ಹಾಗೂ ಸಾಮಾಜಿಕ ಸೇವೆಯನ್ನು ಸ್ಮರಿಸಲಿದ್ದಾರೆ ಎಂದು ತಿಳಿಸಿದರು.

ಬಿ.ಎಸ್. ಯಡಿಯೂರಪ್ಪ ಅವರು ಗ್ರಾಮೀಣ ಭಾಗದ ಜನರ ಧ್ವನಿಯಾಗಿ, ರೈತರ ಪರ ಹೋರಾಟಗಾರರಾಗಿ ಹಾಗೂ ಅಭಿವೃದ್ಧಿಪರ ಆಡಳಿತಗಾರರಾಗಿ ರಾಜ್ಯ ರಾಜಕಾರಣದಲ್ಲಿ ಅಚ್ಚಳಿಯದ ಗುರುತು ಬಿಟ್ಟಿದ್ದಾರೆ. ಅವರ ಐದು ದಶಕಗಳ ರಾಜಕೀಯ ಜೀವನ ಯುವ ರಾಜಕಾರಣಿಗಳಿಗೆ ಮಾದರಿಯಾಗಿದೆ ಎಂದು ಎ.ಎಸ್. ಪಾಟೀಲ ನಡಹಳ್ಳಿ ಹೇಳಿದರು.

ಅಭಿಮಾನೋತ್ಸವ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಸನ್ಮಾನ ಸಮಾರಂಭ, ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವ ಪ್ರದಾನ ಹಾಗೂ ಜನಪರ ಯೋಜನೆಗಳ ಕುರಿತು ಚರ್ಚೆಗಳು ನಡೆಯಲಿವೆ. ಕಾರ್ಯಕ್ರಮದ ಯಶಸ್ಸಿಗಾಗಿ ಈಗಾಗಲೇ ಭಾರಿ ಸಿದ್ಧತೆ ಕೈಗೊಳ್ಳಲಾಗಿದ್ದು, ಚಿತ್ರದುರ್ಗ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

ರಾಜ್ಯದ ರಾಜಕೀಯ ವಲಯದಲ್ಲಿ ವಿಶೇಷ ಗಮನ ಸೆಳೆದಿರುವ ಈ ಕಾರ್ಯಕ್ರಮಕ್ಕೆ ಬಿಜೆಪಿ ಹಿರಿಯ ನಾಯಕರು, ಶಾಸಕರು, ಸಂಸದರು ಹಾಗೂ ವಿವಿಧ ಸಮುದಾಯಗಳ ಮುಖಂಡರು ಭಾಗವಹಿಸುವ ನಿರೀಕ್ಷೆ ಇದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande