ಬಬಲೇಶ್ವರ : ಕಾಂಗ್ರೆಸ್ ಗೆ ನೂರಾರು ಬಿಜೆಪಿ ಮುಖಂಡರು, ಕಾರ್ಯಕರ್ತರು
ವಿಜಯಪುರ, 07 ಮೇ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂದು ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿಯ ಹಲವು ಪ್ರಮುಖ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ
ಪಾಟೀಲ್


ವಿಜಯಪುರ, 07 ಮೇ (ಹಿ.ಸ.) :

ಆಂಕರ್ : ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂದು ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿಯ ಹಲವು ಪ್ರಮುಖ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಕ್ಷೇತ್ರದ ರಾಜಕೀಯ ವಾತಾವರಣದಲ್ಲಿ ಹೊಸ ಚೈತನ್ಯ ಮೂಡಿಸಿದರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಹರ್ಷ ವ್ಯಕ್ತಪಡಿಸಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳು ಹಾಗೂ “ನುಡಿದಂತೆ ನಡೆಯುವ ಸರ್ಕಾರ” ಎಂಬ ಭರವಸೆಯನ್ನು ಕಾರ್ಯರೂಪಕ್ಕೆ ತಂದಿರುವ ಹಿನ್ನೆಲೆಯಲ್ಲಿ ಅನೇಕರು ಕಾಂಗ್ರೆಸ್ ಸಿದ್ಧಾಂತ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ ಪಕ್ಷ ಸೇರ್ಪಡೆಯಾಗಿದ್ದಾರೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಹೊಸದಾಗಿ ಸೇರ್ಪಡೆಯಾದ ನಾಯಕರಿಗೆ ಪಕ್ಷದ ಶಾಲು ಹೊದಿಸಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಈ ವೇಳೆ ಮಾತನಾಡಿದ ಪಕ್ಷದ ಮುಖಂಡರು, “ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಮಾಜದ ಎಲ್ಲಾ ವರ್ಗಗಳಿಗೂ ತಲುಪುತ್ತಿದ್ದು, ಬಡವರು, ರೈತರು, ಮಹಿಳೆಯರು ಹಾಗೂ ಯುವಜನರಲ್ಲಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಾರ ವಿಶ್ವಾಸ ಮೂಡಿದೆ. ಇದೇ ಕಾರಣಕ್ಕೆ ವಿವಿಧ ಪಕ್ಷಗಳ ಕಾರ್ಯಕರ್ತರು ಕಾಂಗ್ರೆಸ್ ಕಡೆ ಆಕರ್ಷಿತರಾಗುತ್ತಿದ್ದಾರೆ” ಎಂದು ಹೇಳಿದರು.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಪ್ರಮುಖರಲ್ಲಿ ಸುರೇಶ್ ತೋರವಿ, ಎಚ್.ಎಲ್. ತಳವಾರ, ಪರಸು ಕೋಳಿ, ಗಣಪತಿ ತೋರವಿ, ಅಪ್ಪಸಾಹೇಬ್ ಡ್ಯಾಬೇರಿ, ದಯಾನಂದ ಶಿರಹಟ್ಟಿ, ಪ್ರಕಾಶ್ ಹಾಲಳ್ಳಿ, ಭೀಮು ಹಾಲಳ್ಳಿ, ರಮೇಶ್ ಗುಡದಿನ್ನಿ, ವಿಲಾಸ ಮಾಳಿ, ನಾಗಪ್ಪ ಮಾಳಿ, ಶ್ರೀಮತಿ ಶಾಂತಾಭಾಯಿ ತಳವಾರ, ಗೀತಾ ತೋರವಿ, ಪುಷ್ಪಾ ತೋರವಿ, ಮಂಗಲಾ ತಳವಾರ, ಮನಿಷಾ ತಳವಾರ ಹಾಗೂ ಕವಿತಾ ಹಾಲಳ್ಳಿ ಸೇರಿದಂತೆ ಹಲವರು ಸೇರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪಾಟೀಲ್, “ಬಬಲೇಶ್ವರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಈಗಾಗಲೇ ಬಲಿಷ್ಠವಾಗಿದ್ದು, ಇಂದಿನ ಸೇರ್ಪಡೆಯಿಂದ ಪಕ್ಷದ ಸಂಘಟನೆ ಇನ್ನಷ್ಟು ಗಟ್ಟಿಯಾಗಲಿದೆ. ಮುಂಬರುವ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ವೇಗ ಸಿಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗವಹಿಸಿ ಹೊಸ ಸೇರ್ಪಡೆಯಾದ ನಾಯಕರಿಗೆ ಅಭಿನಂದನೆ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande