ಮೈಸೂರು ಪತ್ರಕರ್ತರ ಸಂಘದ ಕಟ್ಟಡಕ್ಕೆ ಅನುದಾನ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಕೃತಜ್ಞತೆ
ಮೈಸೂರು, 07 ಮೇ (ಹಿ.ಸ.): ಆ್ಯಂಕರ್: ಮೈಸೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರದಿಂದ 3 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಘದ ಪದಾಧಿಕಾರಿಗಳು ಗುರುವಾರ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು. ಮುಖ್ಯಮಂತ್
Honour


ಮೈಸೂರು, 07 ಮೇ (ಹಿ.ಸ.):

ಆ್ಯಂಕರ್:

ಮೈಸೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರದಿಂದ 3 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಘದ ಪದಾಧಿಕಾರಿಗಳು ಗುರುವಾರ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.

ಮುಖ್ಯಮಂತ್ರಿಗಳ ಮೈಸೂರು ನಿವಾಸದಲ್ಲಿ ನಡೆದ ಭೇಟಿಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್ ಹಾಗೂ ಉಪಾಧ್ಯಕ್ಷ ರವಿ ಪಾಂಡವಪುರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅಭಿನಂದನೆ ಸಲ್ಲಿಸಿ ಧನ್ಯವಾದ ಅರ್ಪಿಸಿದರು.

ಈ ವೇಳೆ ಪತ್ರಕರ್ತರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ನೀಡಿರುವ ಸಹಾಯದಿಂದ ಜಿಲ್ಲೆಯ ಪತ್ರಕರ್ತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ನೆರವಾಗಲಿದೆ ಎಂದು ಸಂಘದ ಪದಾಧಿಕಾರಿಗಳು ಅಭಿಪ್ರಾಯಪಟ್ಟರು.

ಪತ್ರಕರ್ತರ ವೃತ್ತಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಆಧುನಿಕ ಸೌಲಭ್ಯಗಳೊಂದಿಗೆ ಕಟ್ಟಡ ನಿರ್ಮಾಣ ಮಾಡುವ ಉದ್ದೇಶ ಹೊಂದಿರುವುದಾಗಿ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande