ಪುರದಾಳು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಪ್ರದೀಪ್ ಎಸ್. ಹೆಬ್ಬೂರ್ ಅವಿರೋಧ ಆಯ್ಕೆ
ಶಿವಮೊಗ್ಗ, 07 ಮೇ (ಹಿ.ಸ.): ಆ್ಯಂಕರ್: ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಪ್ರದೀಪ್ ಎಸ್. ಹೆಬ್ಬೂರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 2ರಂದು ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಪ್ರದೀಪ್ ಎಸ್. ಹೆಬ್ಬೂರ್ ಅವರು ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರಿಂದ ಅವಿ
Elect


ಶಿವಮೊಗ್ಗ, 07 ಮೇ (ಹಿ.ಸ.):

ಆ್ಯಂಕರ್:

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಪ್ರದೀಪ್ ಎಸ್. ಹೆಬ್ಬೂರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮೇ 2ರಂದು ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಪ್ರದೀಪ್ ಎಸ್. ಹೆಬ್ಬೂರ್ ಅವರು ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾದರು ಎಂದು ಪುರದಾಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರದೀಪ್ ಎಸ್. ಹೆಬ್ಬೂರ್ ಅವರಿಗೆ ಗ್ರಾಮ ಪಂಚಾಯಿತಿ ಸದಸ್ಯರು, ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande