

ಬಳ್ಳಾರಿ, 07 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕ ಸರ್ಕಾರದಲ್ಲಿ ಖಾಲಿ ಇರುವ ಮತ್ತು ಆರ್ಥಿಕ ಇಲಾಖೆಯಿಂದ ಅನುಮೋದನೆ ಪಡೆದಿರುವ 56,432 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸಲು ಆಗ್ರಹಿಸಿ ಉದ್ಯೋಗಾ ಕಾಂಕ್ಷಿಗಳ ಹೋರಾಟ ಸಮಿತಿಯ ಬಳ್ಳಾರಿ ಜಿಲ್ಲಾ ಸಮಿತಿಯು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಉದ್ಯೋಗಾ ಕಾಂಕ್ಷಿಗಳ ಹೋರಾಟ ಸಮಿತಿಯ ಬಳ್ಳಾರಿ ಜಿಲ್ಲಾ ಸಂಚಾಲಕರಾದ ಜಗದೀಶ್ ನೇಮಕಲ್ ಅವರು, ಕರ್ನಾಟಕ ಸರ್ಕಾರ ಮೇ ತಿಂಗಳು ಬಂದರೂ ನೇಮಕಾತಿ ಪ್ರಕ್ರಿಯೆ ಪ್ರಾರಂಭ ಮಾಡುತ್ತಿಲ್ಲ. ನೇಮಕಾತಿ ಕುರಿತು ಪಿ.ಸಿ. ಹೂಟ ಸಮಿತಿಯ ಶಿಫಾರಸ್ಸುಗಳನ್ನು ರಕ್ಷಣವೇ ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
ಹೊಸ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಉದ್ಯೋಗಾಕಾಂಕ್ಷಿಗಳಾದ ಪಂಪಾಪತಿ, ಗಾದಿಲಿಂಗ ವೆಂಕಟೇಶ್, ದಾದು, ಬಸವರಾಜ್ ಇನ್ನಿತರರು, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್