
ಶಿವಮೊಗ್ಗ, 07 ಮೇ (ಹಿ.ಸ.):
ಆ್ಯಂಕರ್:
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ರೆಡ್ಡಿ ಸಮಾಜದ ಸಂಯುಕ್ತ ಆಶ್ರಯದಲ್ಲಿ ಮೇ 10ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ನಗರದ ಕುವೆಂಪು ರಂಗಮಂದಿರದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ.
ಶಾಸಕ ಎಸ್.ಎನ್. ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಹಾನಗರ ಪಾಲಿಕೆಯ ಮಹಾಪೌರರು, ವಿವಿಧ ನಿಗಮ-ಮಂಡಳಿ ಅಧ್ಯಕ್ಷರು, ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ.
ಇದೇ ವೇಳೆ ಶಿವಮೊಗ್ಗದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ನಾಗರಾಜ್ ಪರಿಸರ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa