
ಹೊಸಪೇಟೆ, 08 ಮೇ (ಹಿ.ಸ.) :
ಆ್ಯಂಕರ್ : ಪ್ರಸಕ್ತ ಸಾಲಿನಲ್ಲಿ ಹೂವಿನಹಡಗಲಿ ತಾಲೂಕಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ ಪಾಸಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಬಯಸುವ ಎಸ್ಸಿ,ಎಸ್ಟಿ, ವರ್ಗ-1 ಅಭ್ಯರ್ಥಿಗಳಿಗೆ ರೂ.4780 ಹಾಗೂ ಸಾಮಾನ್ಯ ವರ್ಗ, ಓಬಿಸಿ ಅಭ್ಯರ್ಥಿಗಳಿಗೆ ರೂ.4880 ಶುಲ್ಕ ನಿಗದಿಪಡಿಸಲಾಗಿದೆ.
ಲಭ್ಯವಿರುವ ಕೋರ್ಸ್ ಗಳ ವಿವರ: ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್, ಸೈಬರ್ ಫಿಸಿಕಲ್ ಸಿಸ್ಟಮ್ ಆಂಡ್ ಸೆಕ್ಯೂರಿಟಿ, ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸ್ ಲಭ್ಯವಿದ್ದು, ಆಸಕ್ತ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಕಾಲೇಜಿಗೆ ಭೇಟಿ ನೀಡಿ ಪ್ರವೇಶ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9448721423, 8147316279, 9591219575, 9113273556 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್