
ಹೊಸಪೇಟೆ, 08 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಜೈನ್, ಸಿಖ್ಖ್, ಪಾರ್ಸಿ ವಿಧ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನವಾಗಿದೆ.
ಪ್ರಸ್ತುತ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ, ನೀಟ್ನಲ್ಲಿ ಆಯ್ಕೆಯಾಗಿರುವ ವೈಧ್ಯಕೀಯ ಎಂ.ಬಿ.ಬಿ.ಎಸ್ ಮತ್ತು ದಂತ ವೈಧ್ಯಕೀಯ ಬಿ.ಇ, ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೇಕ್ಚರ್, ಬಿ.ಆಯುಷ್ ಫಾರ್ಮಸಿ, ಕೃಷಿ ವಿಜ್ಙಾನ ಮತ್ತು ಪಶು ವೈದ್ಯಕೀಯ ಇಂತಹ ಕೋರ್ಸಗಳಿಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಇಲಾಖೆ ಜಾಲತಾಣ ಮೂಲಕ ಅರ್ಜಿ ಸಲ್ಲಿಸಿದಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08392-294370 ಗೆ ಸಂಪರ್ಕಿಸಬಹುದು ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್