
ಗದಗ, 08 ಮೇ (ಹಿ.ಸ.) :
ಆ್ಯಂಕರ್ : ವೈದ್ಯಕೀಯ ತುರ್ತು ಚಿಕಿತ್ಸೆಯ ನೆರವಿಗಾಗಿ ಬಿಪಿಎಲ್ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಗದಗ ತಾಲೂಕ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಅರ್ಜಿ ಸಲ್ಲಿಸಲು 31-03-2027ರ ವರೆಗೆ ಕಾಲಾವಕಾಶ ನೀಡಲಾಗಿದ್ದು, ಅರ್ಹ ಫಲಾನುಭವಿಗಳು ಹತ್ತಿರದ ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದಕ್ಕೆ ಭೇಟಿ ನೀಡಿ ಬೆಳಿಗ್ಗೆ 10ರಿಂದ ಸಂಜೆ 5ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ವೈದ್ಯಕೀಯ ತುರ್ತು ಚಿಕಿತ್ಸೆಗಾಗಿ ಬಿಪಿಎಲ್ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಫಲಾನುಭವಿಗಳು ಎಲ್ಲ ಸದಸ್ಯರ ಆಧಾರ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, 6 ವರ್ಷದ ಒಳಗಿನ ಮಕ್ಕಳ ಜನನ ಪ್ರಮಾಣ ಪತ್ರ ದಾಖಲೆಗಳೊಂದಿಗೆ ಎಲ್ಲಾ ಸದಸ್ಯರು ಹೆಬ್ಬೆಟ್ಟು ಕೊಡಬೇಕು ಎಂದು ಗದಗ ತಾಲೂಕ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP