
ರಾಯಚೂರು, 08 ಮೇ (ಹಿ.ಸ.) :
ಆ್ಯಂಕರ್ : ಕೈಮಗ್ಗ ಮತ್ತು ಜವಳಿ ಇಲಾಖೆಯು ರಾಯಚೂರು 2026-27ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸಗೆ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ 39 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಈ ಕೆಳಕಂಡ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ,ಗದಗ -ಬೆಟಗೇರಿ 22 ಅಭ್ಯರ್ಥಿ, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೆಲಂ ತಮಿಳುನಾಡು, 12 ಅಭ್ಯರ್ಥಿ, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ ನೆಲ್ಲೂರು ಆಂದ್ರಪ್ರದೇಶ, 3 ಅಭ್ಯರ್ಥಿ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು ಕೇರಳ, 2 22 ಅಭ್ಯರ್ಥಿ ಸಂಸ್ಥೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಿನಾಂಕ:01.07.2026ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢೀಕೃತ ಅಂಶಗಳು ಮೆರಿಟ್ ಲೆಕ್ಕಾಚಾರಕ್ಕೆ ಆಯ್ಕೆ ಮಾಡಲಾಗುತ್ತದೆ,
ಅಭ್ಯರ್ಥಿಗಳು ತಮ್ಮ ಅರ್ಜಿಯನ https://khtigadag.ac.in/Admissionform.pdf ವೆಬ್ ಸೈಟ್ ನಲ್ಲಿ ಲಿಂಕ್ ಡೌನಲೋಡ್ ಮಾಡಿಕೊಂಡು ದಿನಾಂಕ 30.05.2026ರ ಒಳಗಾಗಿ ಪೂರ್ಣ ಭರ್ತಿ ಮಾಡಿದ ಆರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ನರಸಾಪೂರ ಗದಗ-ಬೆಟಗೇರಿ ಇವರಿಗೆ ಸಲ್ಲಿಸಬಹುದೆಂದು ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿಗಳು ತಿಳಿಸಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್