ವಿಜಯಪುರದ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅತ್ಯಾಧುನಿಕ ಶಸ್ತ್ರಚಿಕಿತ್ಸಾ ತಂತ್ರಜ್ಞಾನ ಉದ್ಘಾಟನೆ
ವಿಜಯಪುರ, 08 ಮೇ (ಹಿ.ಸ.) : ಆಂಕರ್ : ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸೇವಾ ಕ್ಷೇತ್ರದಲ್ಲಿ ನಿರಂತರ ನವೀನತೆ ಮತ್ತು ಗುಣಮಟ್ಟದ ಸೇವೆಗೆ ವಿಶೇಷ ಒತ್ತು ನೀಡುತ್ತಿರುವ ಬೀ ಎಲ್ ಡಿ i BLDE (Deemed to be University) ಅಧೀನದ Shri B.M. Patil Medical College, Hospital & Research Ce
ನೂತನ


ವಿಜಯಪುರ, 08 ಮೇ (ಹಿ.ಸ.) :

ಆಂಕರ್ : ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸೇವಾ ಕ್ಷೇತ್ರದಲ್ಲಿ ನಿರಂತರ ನವೀನತೆ ಮತ್ತು ಗುಣಮಟ್ಟದ ಸೇವೆಗೆ ವಿಶೇಷ ಒತ್ತು ನೀಡುತ್ತಿರುವ ಬೀ ಎಲ್ ಡಿ i BLDE (Deemed to be University) ಅಧೀನದ Shri B.M. Patil Medical College, Hospital & Research Centre ಮತ್ತೊಂದು ಮಹತ್ವದ ಸಾಧನೆಗೆ ಸಾಕ್ಷಿಯಾಗಿದೆ.

ಇಂದು ಕಾಲೇಜಿನ ಆಸ್ಪತ್ರೆ ಆವರಣದಲ್ಲಿ ವಿಶ್ವದರ್ಜೆಯ ಅತ್ಯಾಧುನಿಕ ಶಸ್ತ್ರಚಿಕಿತ್ಸಾ ಉಪಕರಣವಾದ Karl Storz Rubina Laparoscopy Set ಅನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಯಿತು.

ಈ ಹೊಸ ತಂತ್ರಜ್ಞಾನವನ್ನು ಅಳವಡಿಸುವ ಮೂಲಕ ಗಾಲ್ ಬ್ಲಾಡರ್, ಅಪೆಂಡಿಕ್ಸ್, ಹರ್ನಿಯಾ ಸೇರಿದಂತೆ ವಿವಿಧ ಜಟಿಲ ಲ್ಯಾಪರೋಸ್ಕೋಪಿಕ್ ಶಸ್ತ್ರಚಿಕಿತ್ಸೆಗಳನ್ನು ಇನ್ನಷ್ಟು ನಿಖರವಾಗಿ ಹಾಗೂ ಸುರಕ್ಷಿತವಾಗಿ ನಡೆಸಲು ಸಾಧ್ಯವಾಗಲಿದೆ. ಇದರಿಂದ ರೋಗಿಗಳಿಗೆ ಕಡಿಮೆ ನೋವು, ಕಡಿಮೆ ರಕ್ತಸ್ರಾವ, ಸೋಂಕಿನ ಅಪಾಯ ಕಡಿಮೆಯಾಗುವುದು ಹಾಗೂ ವೇಗವಾದ ಚೇತರಿಕೆ ಸಾಧ್ಯವಾಗುತ್ತದೆ.

ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಆಸ್ಪತ್ರೆಯ ಆಡಳಿತ ಮಂಡಳಿ ಹಾಗೂ ಹಿರಿಯ ವೈದ್ಯಕೀಯ ತಜ್ಞರು, ಆಧುನಿಕ ವೈದ್ಯಕೀಯ ತಂತ್ರಜ್ಞಾನವನ್ನು ಗ್ರಾಮೀಣ ಹಾಗೂ ಬಡ ಜನರಿಗೆ ತಲುಪಿಸುವುದು ಸಂಸ್ಥೆಯ ಪ್ರಮುಖ ಗುರಿಯಾಗಿದ್ದು, ಈ ಹೊಸ ಉಪಕರಣವು ಆ ದಿಕ್ಕಿನಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದು ತಿಳಿಸಿದರು.

ಈ ಯೋಜನೆಯ ಮೂಲಕ BLDE (DU) ಆಸ್ಪತ್ರೆ ಉತ್ತರ ಕರ್ನಾಟಕದಲ್ಲಿ ಅತ್ಯಾಧುನಿಕ ಶಸ್ತ್ರಚಿಕಿತ್ಸಾ ಸೇವೆಗಳನ್ನು ಇನ್ನಷ್ಟು ಬಲಪಡಿಸುವ ನಿರೀಕ್ಷೆಯಿದೆ.

ಇದೇ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವುದು, ಸಂಶೋಧನೆಗೆ ಉತ್ತೇಜನ ನೀಡುವುದು ಹಾಗೂ ವಿದ್ಯಾರ್ಥಿಗಳಿಗೆ ವಿಶ್ವದರ್ಜೆಯ ತರಬೇತಿ ನೀಡುವುದು ಸಂಸ್ಥೆಯ ನಿರಂತರ ಬದ್ಧತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande