
ಬಳ್ಳಾರಿ, 08 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ‘ಅರಿವು' ಶೈಕ್ಷಣಿಕ ಸಾಲ ಯೋಜನೆಯಡಿ ವಿವಿಧ ವೃತ್ತಿಪರ ಕೋರ್ಸ್ ಗಳ ವ್ಯಾಸಂಗಕ್ಕಾಗಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಮುಸ್ಲಿಂ, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ. 2026-27ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸಲಾಗುವ ಸಿಇಟಿ ಅಥವಾ ನೀಟ್ ಪರೀಕ್ಷೆಯಲ್ಲಿ ಆಯ್ಕೆಯಾಗಿ ವೈದ್ಯಕೀಯ (ಎಂಬಿಬಿಎಸ್) ಮತ್ತು ದಂತ ವೈದ್ಯಕೀಯ (ಬಿಡಿಎಸ್), ಬಿ.ಇ/ಬಿ.ಟೆಕ್ ಮತ್ತು ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ವಿದ್ಯಾರ್ಥಿಗಳು ನಿಗಮದ ಅಧಿಕೃತ ವೆಬ್ಸೈಟ್ https://kmdconline.karnataka.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ನಂತರ ಅದರ ಪ್ರತಿಯೊಂದಿಗೆ ಮೂಲ ಇನ್ಡೆಮ್ನಿಟಿ ಬಾಂಡ್ ಮತ್ತು ಸಾಲಕ್ಕೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ನಿಗದಿತ ದಿನಾಂಕದೊಳಗೆ ಆಯಾ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು
ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಮೌಲಾನ ಆಜಾದ್ ಭವನ, 1ನೇ ಮಹಡಿ, ಮುಸ್ಲಿಂ ಶಾದಿ ಮಹಾಲ್ ಪಕ್ಕದಲ್ಲಿ, ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರ, ಬಳ್ಳಾರಿ-583101 ಅಥವಾ ದೂ.08392-294370 ಅನ್ನು ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್