
ರಾಯಚೂರು, 08 ಮೇ (ಹಿ.ಸ.) :
ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯಲ್ಲಿ 2026-276ನೇ ಸಾಲಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಸದರಿ ಪ್ರತಿಷ್ಠಿತ ಶಾಲೆಯ ವಿದ್ಯಾರ್ಥಿಗಳಿಗೆ ಈ ಹಿಂದೆ ದಿನಾಂಕ: 10-05-2026 ರಂದು ಪ್ರವೇಶ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಸದರಿ ಪ್ರವೇಶ ಪರೀಕ್ಷೆಯನ್ನು ಮುಂದೂಡಿ ದಿನಾಂಕ 17-05-2026 ರಂದು ಭಾನುವಾರ ಪರೀಕ್ಷೆಯನ್ನು ಬೆಳಿಗ್ಗೆ: 9-30 ಗಂಟೆಗೆ ಪ್ರಾಂಶುಪಾಲರು, ಬಾಲಕಿಯರ ಪದವಿ ಪೂರ್ವ ಕಾಲೇಜು ಸ್ಟೇಷನ್ ರಸ್ತೆ, ರಾಯಚೂರುನಲ್ಲಿ ನಡೆಸಲಾಗುತ್ತಿದೆಂದು ಪ್ರವೇಶ ಪರೀಕ್ಷೆಯ ಪ್ರಮಾಣ ಪತ್ರವನ್ನು ಪಡೆಯಲು ಇಲಾಖಾ ವೆಬ್ಸೈಟ್ www.sw.kar.nic.in ನಲ್ಲಿ ಡೌನ ಲೋಡ್ ಮಾಡಿಕೊಂಡು ಪರೀಕ್ಷಗೆ ಹಾಜರಾಗಬೇಕೆಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್