
ಗದಗ, 08 ಮೇ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ರೈತ ರಿಂದ ಖರೀದಿಸಲು ಗದಗ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆದು ರೈತರ ನೋಂದಣಿಯೊಂದಿಗೆ ಖರೀದಿ ಪ್ರಕ್ರೀಯೆ ಪ್ರಗತಿಯಲ್ಲಿರುತ್ತದೆ.
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕಡಲೆಕಾಳು ಉತ್ಪನ್ನವನ್ನು ಖರೀದಿಸಲು ನಿಗದಿಪಡಿಸಿರುವ ಖರೀದಿ ಕಾಲಾವಧಿಯನ್ನು ಮೇ 28 ರ ವರೆಗೆ ವಿಸ್ತರಿಸಿ ನೋಂದಾಯಿತ ರೈತರಿಂದ ಮಾತ್ರ ಖರೀದಿಸಲು ಆದೇಶಿಸಲಾಗಿದೆ ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರು ಹಾಗೂ ಗದಗ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP