ಜಿ ಟಿ ಟಿ ಸಿ ಡಿಪ್ಲೋಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ
ಹೊಸಪೇಟೆ, 08 ಮೇ (ಹಿ.ಸ.) : ಆ್ಯಂಕರ್ : ತಾಲೂಕಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ (ಜಿಟಿಟಿಸಿ) ಪ್ರಸಕ್ತ ಸಾಲಿನಲ್ಲಿ ವಿವಿಧ ಡಿಪ್ಲೊಮಾ ಕೋರ್ಸುಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕಾರ್ಯನಿರ
ಜಿ ಟಿ ಟಿ ಸಿ ಡಿಪ್ಲೋಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ


ಹೊಸಪೇಟೆ, 08 ಮೇ (ಹಿ.ಸ.) :

ಆ್ಯಂಕರ್ : ತಾಲೂಕಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ (ಜಿಟಿಟಿಸಿ) ಪ್ರಸಕ್ತ ಸಾಲಿನಲ್ಲಿ ವಿವಿಧ ಡಿಪ್ಲೊಮಾ ಕೋರ್ಸುಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಸ್ವಾಯತ್ತ ಸಂಸ್ಥೆಯಲ್ಲಿ ಡಿಪ್ಲೋಮಾ ಇನ್ ಟೂಲ್ ಆಂಡ್ ಮೇಕಿಂಗ್, ಡಿಪ್ಲೋಮಾ ಇನ್ ಮೆಕ್ಯಾಟ್ರಾನಿಕ್ಸ್, ಡಿಪ್ಲೋಮಾ ಇನ್ ಪ್ರಿಸಿಶನ್ ಮ್ಯಾನುಫ್ಯಾಕ್ಚರಿಂಗ್ ಕೋರ್ಸ್ ಲಭ್ಯವಿದ್ದು, ಎಸ್ ಎಸ್ ಎಲ್ ಸಿ, ಐಟಿಐ ಪಾಸಾದ ವಿದ್ಯಾರ್ಥಿಗಳು ಇಲಾಖೆಯ ಜಾಲತಾಣ https://gttchrms.karnataka.gov.in/Admissions/ ನ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8105640142, 9902397658, 9964730789, 9902457876, 9845416198 ಗೆ ಸಂಪರ್ಕಿಸಬಹುದು ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande