ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ಅವಧಿ ಮೇ 18ರವರೆಗೆ ವಿಸ್ತರಣೆ
ಬಳ್ಳಾರಿ, 08 ಮೇ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಸುವ ಪ್ರಕ್ರಿಯೆಯ ಕಾಲಾವಧಿಯನ್ನು ಮೇ 18 ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರವು ಆದೇಶಿಸಿದೆ. ಈ ಸೌಲಭ್ಯವು ಕೇವಲ ಈಗಾಗಲೇ ನೋಂದಾಯಿತರಾದ ರೈತರಿಗೆ
ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ಅವಧಿ ಮೇ 18ರವರೆಗೆ ವಿಸ್ತರಣೆ


ಬಳ್ಳಾರಿ, 08 ಮೇ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಸುವ ಪ್ರಕ್ರಿಯೆಯ ಕಾಲಾವಧಿಯನ್ನು ಮೇ 18 ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರವು ಆದೇಶಿಸಿದೆ.

ಈ ಸೌಲಭ್ಯವು ಕೇವಲ ಈಗಾಗಲೇ ನೋಂದಾಯಿತರಾದ ರೈತರಿಗೆ ಮಾತ್ರ ಅನ್ವಯಿಸುತ್ತದೆ. ರೈತರು ಯಾವುದೇ ಮಧ್ಯವರ್ತಿಗಳ ಮೊರೆ ಹೋಗದೆ, ನೇರವಾಗಿ ಸರ್ಕಾರದ ಖರೀದಿ ಕೇಂದ್ರಗಳ ಮೂಲಕವೇ ತಮ್ಮ ಉತ್ಪನ್ನವನ್ನು ಮಾರಾಟ ಮಾಡಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಉಳಿದಂತೆ ಖರೀದಿ ಪ್ರಕ್ರಿಯೆಯ ನಿಯಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಹೆಚ್ಚಿನ ಮಾಹಿತಿ ಅಥವಾ ವಿಚಾರಣೆಗಾಗಿ ರೈತರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬಳ್ಳಾರಿ ಶಾಖೆ ಅಥವಾ ಮೊ.9449864453 ಗೆ ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande