ಮೇ ತಿಂಗಳಲ್ಲೇ ಎರಡು ತಿಂಗಳ ಪಡಿತರ ಅಕ್ಕಿ ವಿತರಣೆ
ಹೊಸಪೇಟೆ, 08 ಮೇ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರದ ಸೂಚನೆಯಂತೆ ಮೇ ಹಾಗೂ ಜೂನ್ ತಿಂಗಳ ಎನ್.ಎಫ್.ಎಸ್.ಎ ಅಕ್ಕಿ ದಾಸ್ತಾನನ್ನು ಒಟ್ಟಿಗೆ ಮೇ ತಿಂಗಳಲ್ಲೇ ನೀಡಲು ನಿರ್ಧರಿಸಲಾಗಿದ್ದು, ಅದರಂತೆ ಜಿಲ್ಲೆಯ ಪಡಿತರ ಚೀಟಿದಾರರಿಗೆ ಎರಡು ತಿಂಗಳ ಅಕ್ಕಿಯನ್ನು ಒಂದೇ ಬಾರಿಗೆ ಹಂಚಿಕೆ ಮಾಡಲಾಗುವುದು. ಅಂ
ಮೇ ತಿಂಗಳಲ್ಲೇ ಎರಡು ತಿಂಗಳ ಪಡಿತರ ಅಕ್ಕಿ ವಿತರಣೆ


ಹೊಸಪೇಟೆ, 08 ಮೇ (ಹಿ.ಸ.) :

ಆ್ಯಂಕರ್ : ಕೇಂದ್ರ ಸರ್ಕಾರದ ಸೂಚನೆಯಂತೆ ಮೇ ಹಾಗೂ ಜೂನ್ ತಿಂಗಳ ಎನ್.ಎಫ್.ಎಸ್.ಎ ಅಕ್ಕಿ ದಾಸ್ತಾನನ್ನು ಒಟ್ಟಿಗೆ ಮೇ ತಿಂಗಳಲ್ಲೇ ನೀಡಲು ನಿರ್ಧರಿಸಲಾಗಿದ್ದು, ಅದರಂತೆ ಜಿಲ್ಲೆಯ ಪಡಿತರ ಚೀಟಿದಾರರಿಗೆ ಎರಡು ತಿಂಗಳ ಅಕ್ಕಿಯನ್ನು ಒಂದೇ ಬಾರಿಗೆ ಹಂಚಿಕೆ ಮಾಡಲಾಗುವುದು.

ಅಂತ್ಯೋದಯ ಕಾರ್ಡು ಹೊಂದಿದ ಪ್ರತಿ ಪಡಿತರ ಚೀಟಿಗೆ ಒಂದು ತಿಂಗಳಿಗೆ 35 ಕೆ.ಜಿ ಯಂತೆ ಒಟ್ಟು 70 ಕೆ.ಜಿ ಅಕ್ಕಿ ಹಾಗೂ ಬಿ.ಪಿ.ಎಲ್ ಕಾರ್ಡು ಹೊಂದಿದ ಪ್ರತಿ ಸದಸ್ಯರಿಗೆ 5 ಕೆ.ಜಿ ಯಂತೆ ಪಡಿತರ ಚೀಟಿಯಲ್ಲಿನ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಪ್ರತಿ ಸದಸ್ಯರಿಗೆ 10 ಕೆ.ಜಿ ಯಂತೆ ಅಕ್ಕಿ ವಿತರಣೆ ಮಾಡಲಾಗುವುದು.

ಮೇ ಹಾಗೂ ಜೂನ್ ತಿಂಗಳ ಪಡಿತರವನ್ನು ಒಟ್ಟಿಗೆ ಪಡೆಯುವ ಸಂದರ್ಭದಲ್ಲಿ, ಕಾರ್ಡುದಾರರು ತಾಂತ್ರಿಕ ದಾಖಲೀಕರಣಕ್ಕಾಗಿ ಎರಡು ಬಾರಿ ಬಯೋಮೆಟ್ರಿಕ್ (ಹೆಬ್ಬೆಟ್ಟಿನ ಗುರುತು) ನೀಡುವುದು ಕಡ್ಡಾಯವಾಗಿದೆ. ಆದ್ದರಿಂದ ಪಡಿತರ ಚೀಟಿದಾರರು ಯಾವುದೇ ಗೊಂದಲಕ್ಕೆ ಒಳಗಾಗದೆ ಸಹಕರಿಸಬೇಕು.

ಎರಡು ಬಾರಿ ಬೆರಳು ಮುದ್ರೆ ನೀಡಿದ ನಂತರವಷ್ಟೇ ಪೂರ್ಣ ಪ್ರಮಾಣದ ಧಾನ್ಯ ಲಭ್ಯವಾಗಲಿದೆ. ಪಡಿತರ ಚೀಟಿದಾರರು ಮೇ ಮಾಹೆಯಲ್ಲಿಯೇ ಎರಡು ತಿಂಗಳ ಅಕ್ಕಿಯನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande