
ಬಳ್ಳಾರಿ, 08 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಮೂರ್ತಿ ಎಲ್ ಅವರು ಮೇ 17 ಮತ್ತು 18ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಮೇ 18 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಕುಂದುಕೊರತೆಗಳ ಸಭೆ ನಡೆಯಲಿದೆ. ಬಳಿಕ ಮಧ್ಯಾಹ್ನ 2.15 ಗಂಟೆಗೆ ಸುದ್ದಿಗೋಷ್ಠಿ ನಡೆಸುವರು.
ನಂತರ ಮಧ್ಯಾಹ್ನ 3 ಗಂಟೆಗೆ ವಿವಿಧ ಇಲಾಖೆಗಳ ವತಿಯಿಂದ ಎಸ್ಸಿ, ಎಸ್ಟಿ ಸಮುದಾಯದ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ಸಾರ್ವಜನಿಕರಿಗೆ ಮನವಿ:
ಈ ಕುಂದುಕೊರತೆ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿ ತಮ್ಮ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್