
ಕೊಪ್ಪಳ, 09 ಮೇ (ಹಿ.ಸ.) :
ಆ್ಯಂಕರ್ : 2026-27 ನೇ ಸಾಲಿಗಾಗಿ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಲೆಮಾರಿ/ಅರೆಅಲೆಮಾರಿ ಜನಾಂಗದ ಆಶ್ರಮ ವಸತಿ ಶಾಲೆಯಲ್ಲಿ 1ನೇ ತರಗತಿಯಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳಲ್ಲಿ ಬರುವ ಬರುವ ಅಲೆಮಾರಿ/ಅರೆಅಲೆಮಾರಿ ಜನಾಂಗಗಳಾದ ಭೈರಾಗಿ(ಬಾವ) ಬಾಲಸಂತೋ-ಜೋ, ಬಾಜಿಗರ್, ಭರಡಿ, ಬುಡ್ಬುಡಕಿ-ಜೋ-ಗೋಂಧಳಿ, ಚಾರ, ಚಿತ್ರಕಥಿ-ಜೋ, ಧೋಲಿ, ಡವೇರಿ, ದೊಂಬರಿ, ಘಿಸಾಡಿ, ಗಾರುಡಿ, ಗೋಪಾಲ್, ಗೊಂದಳಿ, ಹೆಳವ, ಜೋಗಿ, ಕೆಲ್ಕರಿ, ಕೊಲ್ಲಹಟ್ಟಿ-ನಂದಿವಾಲ-ಜೋ-ಗೊಂದಳಿ, ಪುಲ್ಮಾಲಿ, ನಾಥಪಂಥಿ, ಡೌರಿಗೋಸಾವಿ, ನಿರ್ಶಿಕಾರಿ, ಪಾಂಗ್ಯುಯಲ್, ಜೋ(ಸಾದ ಜೋ) ಸಾನ್ಸಿಯ, ಸರಾನಿಯ, ತಿರುಮಲಿ, ವಾಯ್ಡು, ವಾಸ್ದೇವೆ, ವಾಡಿ, ವಾಗ್ರಿ, ವಿರ್, ಬಜನಿಯ, ಶಿಕ್ಕಲಿಗರ್, ಗೊಲ್ಲ, ಕಿಲ್ಲಿಕ್ಯಾತ, ಸರೋಡಿ, ದುರ್ಗ ಮುರ್ಗ(ಬುರ- ಬುರ ಚ), ಹಾವಗಾರ(ಹಾವಾಡಿಗರ್) ಪಿಚಗುಂಟಲ, ಮಸಣಿಯ ಯೋಗಿ, (ಬೆಸ್ತರ್) ಬುಂಡಬೆಸ್ತ, ಕಟಬು, ದರ್ವೆಶ್, ಕಾಶಿ ಕಪಾಡಿ, ದೊಂಬಿದಾಸ್ ಮತ್ತು ಬೈಲ್ಪತ್ತರ್ ಮುಂತಾದ ಆಲೆಮಾರಿ/ಅರೆಅಲೆಮಾರಿ ಜನಾಂಗಗಳಿಂದ (ಜಾತಿ) ವಸತಿ ಸೌಲಭ್ಯಕ್ಕಾಗಿ 1ನೇ ತರಗತಿಯಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪ್ರವರ್ಗ-1/ಅಲೆಮಾರಿ/ಅರೆಅಲೆಮಾರಿ ಜನಾಂಗಕ್ಕೆ ಸೇರಿರಬೇಕು ಮತ್ತು ಕುಟುಂಬದ ವಾರ್ಷಿಕ ವರಮಾನ ರೂ. 2.50,000/- ಒಳಗಿರಬೇಕು. ತಹಶೀಲ್ದಾರರು ನೀಡಿದ ದೃಢೀಕೃತ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು.
ಅರ್ಜಿಯನ್ನು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯ, ಕುಷ್ಟಗಿ ಇಲ್ಲಿ ಪಡೆದು ಭರ್ತಿ ಮಾಡಿ, ದೃಢೀಕೃತ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾಸ್ ಪೆÇೀರ್ಟ್ ಅಳತೆಯ 2 ಭಾವಚಿತ್ರ ಇತರೆ ಅಗತ್ಯ ದಾಖಲೆಗಳೊಂದಿಗೆ ಮೇ 30 ರೊಳಗಾಗಿ ಕುಷ್ಟಗಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಅಪೂರ್ಣವಾದ ಮತ್ತು ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕುಷ್ಟಗಿ ತಾಲ್ಲೂಕ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್