ಇಂದು ಚಿತ್ರದುರ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ
ವೇದಿಕೆ
ನಿನ್ನೆ ಬಿಎಸ್ ವೈ ಪುರ ಪ್ರವೇಶದ ಚಿತ್ರ


ಚಿತ್ರದುರ್ಗ, 09 ಮೇ (ಹಿ.ಸ.) :

ಆ್ಯಂಕರ್ : ರಾಜ್ಯ ರಾಜಕಾರಣದಲ್ಲಿ ದೀರ್ಘಕಾಲ ರೈತ ನಾಯಕ ಎಂದು ಗುರುತಿಸಲಾಗಿರುವ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣದ ಸುವರ್ಣ ಸಂಭ್ರಮದ ಅಂಗವಾಗಿ ಚಿತ್ರದುರ್ಗದಲ್ಲಿ ಇಂದು ಅಭಿಮಾನೋತ್ಸವಕ್ಕಾಗಿ ಇಡೀ ನಗರ ಸಿದ್ದಗೊಂಡಿದೆ.

ಈ ಬೃಹತ್ ಸಮಾರಂಭವು ಬಿಜೆಪಿಯ ಶಕ್ತಿ ಪ್ರದರ್ಶನದ ವೇದಿಕೆಯಾಗಿಯೂ ರೂಪುಗೊಂಡಿದೆ. ರಾಜ್ಯದ ಮೂಲೆಮೂಲೆಗಳಿಂದ ಲಕ್ಷಾಂತರ ಕಾರ್ಯಕರ್ತರು ಹಾಗೂ ಅಭಿಮಾನಿ ಗಳು ಭಾಗವಹಿಸುವ ನಿರೀಕ್ಷೆ ಇದೆ.

ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಮಠಾಧೀಶರು, ಬಿಜೆಪಿಯ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ. ಸುಮಾರು 10 ಲಕ್ಷಕ್ಕೂ ಅಧಿಕ ಜನರು ಸೇರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಭದ್ರತೆ ಹಾಗೂ ವಿಶೇಷ ವ್ಯವಸ್ಥೆಗಳು ಮಾಡಲಾಗಿದೆ.

ಚಿತ್ರದುರ್ಗದ ಹೊರವಲಯದಲ್ಲಿ ಜರ್ಮನ್ ಮಾದರಿಯ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಪ್ರವೇಶ ದ್ವಾರವನ್ನು ಏಳು ಸುತ್ತಿನ ಕೋಟೆಯ ರೂಪದಲ್ಲಿ ವಿನ್ಯಾಸಗೊಳಿಸಲಾಗಿದೆ. ಸಂಪೂರ್ಣ ಆವರಣ ಕೇಸರಿ ಧ್ವಜಗಳು, ಬ್ಯಾನರ್ ಗಳು ಮತ್ತು ಕಟೌಟ್ ಗಳಿಂದ ಅಲಂಕರಿಸಲ್ಪಟ್ಟಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande