ಅಪ್ರಾಪ್ತರಿಗೆ ಬೈಕ್ ಚಾಲನೆ ನೀಡಿದ ಪೋಷಕರಿಗೆ ಭಾರಿ ದಂಡ ; ವಿಜಯಪುರದಲ್ಲಿ 3 ಪ್ರಕರಣ ದಾಖಲು
ವಿಜಯಪುರ, 09 ಮೇ (ಹಿ.ಸ.) : ಆಂಕರ್ : ವಿಜಯಪುರ ನಗರದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಮೂವರು ಪೋಷಕರ ವಿರುದ್ಧ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ, ನ್ಯಾಯಾಲಯವು ತಲಾ ₹25 ಸಾವಿರ ದಂಡ ವಿಧಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಈ ಕುರಿತು ಪ್ರಕಟಣೆ ನ
Dand


ವಿಜಯಪುರ, 09 ಮೇ (ಹಿ.ಸ.) :

ಆಂಕರ್ : ವಿಜಯಪುರ ನಗರದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಮೂವರು ಪೋಷಕರ ವಿರುದ್ಧ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ, ನ್ಯಾಯಾಲಯವು ತಲಾ ₹25 ಸಾವಿರ ದಂಡ ವಿಧಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಈ ಕುರಿತು ಪ್ರಕಟಣೆ ನೀಡಿರುವ ವಿಜಯಪುರ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಂಬರಗಿ ಅವರು, ನಗರದ ವಾಜಪೇಯಿ ರಸ್ತೆ, ಬಿಎಲ್ಡಿಇ ರಸ್ತೆ ಹಾಗೂ ಲಿಂಗದಗುಡಿ ರಸ್ತೆಯಲ್ಲಿ ಸಂಚಾರಿ ಠಾಣೆ ಪೊಲೀಸರು ವಾಹನ ತಪಾಸಣೆ ನಡೆಸುವ ವೇಳೆ ಮೂವರು ಅಪ್ರಾಪ್ತ ವಯಸ್ಸಿನ ಬಾಲಕರು ದ್ವಿಚಕ್ರ ವಾಹನ ಚಲಾಯಿಸುತ್ತಿರುವುದು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಪರಿಶೀಲನೆ ವೇಳೆ ಕೆಎ-28/ಎಚ್ಎಫ್-6571, ಕೆಎ-28/ಎಚ್ಎಫ್-1202 ಹಾಗೂ ಕೆಎ-28/ಇವ್ಹಿ-2207 ಸಂಖ್ಯೆಯ ಮೋಟಾರ್ ಸೈಕಲ್ಗಳನ್ನು ಚಲಾಯಿಸುತ್ತಿದ್ದ ಬಾಲಕರು ಅಪ್ರಾಪ್ತರು ಎಂಬುದು ಖಚಿತವಾದ ಹಿನ್ನೆಲೆಯಲ್ಲಿ, ಅವರಿಗೆ ವಾಹನ ಚಲಾಯಿಸಲು ನೀಡಿದ ಪೋಷಕರ ವಿರುದ್ಧ ವಿಜಯಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳನ್ನು ದಾಖಲಿಸಲಾಯಿತು.

ನಂತರ ಪ್ರಕರಣಗಳ ತನಿಖೆ ಪೂರ್ಣಗೊಳಿಸಿ ವಿಜಯಪುರದ 4ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಮೇ 8ರಂದು ಮೂವರು ಪೋಷಕರಿಗೂ ತಲಾ ₹25,000 ದಂಡ ವಿಧಿಸಿ ಆದೇಶಿಸಿದೆ.

ಇದರ ಜೊತೆಗೆ ಸಂಬಂಧಿತ ವಾಹನಗಳ ನೋಂದಣಿಯನ್ನು ಒಂದು ವರ್ಷದವರೆಗೆ ರದ್ದುಪಡಿಸುವಂತೆ ಹಾಗೂ ಆ ಮೂವರು ಅಪ್ರಾಪ್ತ ಬಾಲಕರಿಗೆ ಅವರು 25 ವರ್ಷ ವಯಸ್ಸು ತಲುಪುವವರೆಗೆ ಚಾಲನಾ ಪರವಾನಿಗೆ ಅಥವಾ ಕಲಿಕಾ ಪರವಾನಿಗೆ ನೀಡಬಾರದು ಎಂದು ನ್ಯಾಯಾಲಯ ಆದೇಶಿಸಿದೆ.

ಅಪ್ರಾಪ್ತರಿಗೆ ವಾಹನ ನೀಡುವುದು ಕಾನೂನುಬಾಹಿರವಾಗಿದ್ದು, ಇದರಿಂದ ರಸ್ತೆ ಅಪಘಾತಗಳ ಅಪಾಯ ಹೆಚ್ಚಾಗುತ್ತದೆ. ಆದ್ದರಿಂದ ಪೋಷಕರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಿ ಮಕ್ಕಳಿಗೆ ವಾಹನ ಚಲಾಯಿಸಲು ಅವಕಾಶ ನೀಡಬಾರದು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande