ತುಂಗಭದ್ರಾ ನದಿಯಲ್ಲಿ ಬಾಲಕ ನಾಪತ್ತೆ
ಗದಗ, 09 ಮೇ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಗ್ರಾಮದ ವ್ಯಾಪ್ತಿಯ ತುಂಗಭದ್ರಾ ನದಿಯಲ್ಲಿ ಬಾಲಕನೊಬ್ಬ ನಾಪತ್ತೆಯಾಗಿರುವ ಘಟನೆ ಆತಂಕ ಮೂಡಿಸಿದೆ. ನಾಪತ್ತೆಯಾದ ಬಾಲಕನನ್ನು ಬಸವರಾಜ್ ಮೇಗಳಮನಿ (16) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆಯಿಂದಲೇ ಬಸವರಾಜ್ ಗ್ರಾಮದಲ
ಫೋಟೋ


ಗದಗ, 09 ಮೇ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಗ್ರಾಮದ ವ್ಯಾಪ್ತಿಯ ತುಂಗಭದ್ರಾ ನದಿಯಲ್ಲಿ ಬಾಲಕನೊಬ್ಬ ನಾಪತ್ತೆಯಾಗಿರುವ ಘಟನೆ ಆತಂಕ ಮೂಡಿಸಿದೆ. ನಾಪತ್ತೆಯಾದ ಬಾಲಕನನ್ನು ಬಸವರಾಜ್ ಮೇಗಳಮನಿ (16) ಎಂದು ಗುರುತಿಸಲಾಗಿದೆ.

ನಿನ್ನೆ ಸಂಜೆಯಿಂದಲೇ ಬಸವರಾಜ್ ಗ್ರಾಮದಲ್ಲಿ ಕಾಣೆಯಾಗಿದ್ದ ಹಿನ್ನೆಲೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ವಿವಿಧೆಡೆ ಹುಡುಕಾಟ ನಡೆಸಿದ್ದರು. ಈ ವೇಳೆ ತುಂಗಭದ್ರಾ ನದಿ ತೀರದಲ್ಲಿ ಬಾಲಕನ ಚಪ್ಪಲಿ ಪತ್ತೆಯಾಗಿರುವುದರಿಂದ ಆತ ನದಿಗೆ ಇಳಿದಿರುವ ಅನುಮಾನ ವ್ಯಕ್ತವಾಗಿದೆ.

ಘಟನೆ ತಿಳಿಯುತ್ತಿದ್ದಂತೆ ಗ್ರಾಮಸ್ಥರು ನದಿ ತೀರದಲ್ಲಿ ಶೋಧ ಕಾರ್ಯ ಆರಂಭಿಸಿದ್ದು, ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ 112 ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆಯನ್ನು ಚುರುಕುಗೊಳಿಸಿದರು. ಸಿಂಗಟಾಲೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಾಲಕನಿಗಾಗಿ ತೀವ್ರ ಶೋಧ ಮುಂದುವರಿದಿದೆ.

ನದಿಯ ನೀರಿನ ಹರಿವು ಹೆಚ್ಚಿರುವ ಹಿನ್ನೆಲೆ ಶೋಧ ಕಾರ್ಯಕ್ಕೆ ಅಡಚಣೆ ಎದುರಾಗುತ್ತಿದೆ ಎಂದು ತಿಳಿದುಬಂದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande