
ಕೊಪ್ಪಳ, 09 ಮೇ (ಹಿ.ಸ.) :
ಆ್ಯಂಕರ್ : ಜಿಲ್ಲೆಯಾದ್ಯಂತ ರಾಷ್ಟ್ರೀಯ ಪಲ್ಸ್ಪೆÇೀಲಿಯೋ ಲಸಿಕಾ ಕಾರ್ಯಕ್ರಮವನ್ನು ಜೂನ್ 28 ರಿಂದ ಜುಲೈ 1 ವರೆಗೆ ನಾಲ್ಕು ದಿನಗಳ ಕಾಲ ಹಮ್ಮಿಕೊಳ್ಳಲಾಗುತ್ತಿದ್ದು, ಅದರ ಪೂರ್ವಭಾವಿ ಸಿದ್ಧತೆಗಾಗಿ ಜಿಲ್ಲಾ ಮಟ್ಟದ ಜಾಗೃತ ಸಮಿತಿಯ ಸಭೆಯನ್ನು ಮೇ 12 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ
ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ವಹಿಸಿಕೊಳ್ಳುವರು. ಆದ್ದರಿಂದ ಸಭೆಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ತಾಲೂಕಾ ಮಟ್ಟದ ಅಧಿಕಾರಿಗಳು ತಪ್ಪದೇ ಖುದ್ದಾಗಿ ಹಾಜರಾಗಲು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್