
ಬೆಂಗಳೂರು, 09 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದಾದ್ಯಂತ ಇಂದು ಒಣ ಹವೆ ಮತ್ತು ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಧ್ಯಾಹ್ನದ ನಂತರ ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ರಾಜ್ಯದ ಹಲವೆಡೆ ಗುಡುಗು–ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯೂ ನೀಡಲಾಗಿದೆ.
ಜನತೆ ವಿಶೇಷವಾಗಿ ಮಧ್ಯಾಹ್ನ ನಂತರದ ಹವಾಮಾನ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa