ದೇವಾಂಗ ಸಮಾಜದ ಅಭಿವೃದ್ಧಿಗೆ ಸರ್ಕಾರ ಬದ್ಧ : ಸಚಿವ ಆರ್.ಬಿ. ತಿಮ್ಮಾಪೂರ
ಬಾಗಲಕೋಟೆ, 09 ಮೇ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದ ಐತಿಹಾಸಿಕ ನೆಲೆಯಾದ ಬಾದಾಮಿಯಲ್ಲಿ ಇಂದು ನಡೆದ ‘ಅಖಿಲ ಭಾರತ ದೇವಾಂಗ ಜನ ಜಾಗೃತಿ ಸಮಾವೇಶ’ ಭವ್ಯವಾಗಿ ನೆರವೇರಿತು. ಸಮಾವೇಶದಲ್ಲಿ ಭಾಗವಹಿಸಿದ ಸಚಿವ ಆರ್.ಬಿ. ತಿಮ್ಮಾಪೂರ ಅವರು ದೇವಾಂಗ ಸಮಾಜದ ಶ್ರೇಯೋಭಿವೃದ್ಧಿ, ಸಾಮಾಜಿಕ
ಸಭೆ


ಬಾಗಲಕೋಟೆ, 09 ಮೇ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದ ಐತಿಹಾಸಿಕ ನೆಲೆಯಾದ ಬಾದಾಮಿಯಲ್ಲಿ ಇಂದು ನಡೆದ ‘ಅಖಿಲ ಭಾರತ ದೇವಾಂಗ ಜನ ಜಾಗೃತಿ ಸಮಾವೇಶ’ ಭವ್ಯವಾಗಿ ನೆರವೇರಿತು. ಸಮಾವೇಶದಲ್ಲಿ ಭಾಗವಹಿಸಿದ ಸಚಿವ ಆರ್.ಬಿ. ತಿಮ್ಮಾಪೂರ ಅವರು ದೇವಾಂಗ ಸಮಾಜದ ಶ್ರೇಯೋಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ ಎಂದು ತಿಳಿಸಿದರು.

ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ದೇವಾಂಗ ಸಮಾಜವು ರಾಜ್ಯದ ಸಾಂಸ್ಕೃತಿಕ, ಆರ್ಥಿಕ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ಮಹತ್ವದ ಕೊಡುಗೆ ನೀಡುತ್ತಿದ್ದು, ಸಮಾಜದ ಯುವಕರು ಶಿಕ್ಷಣ, ಉದ್ಯೋಗ ಹಾಗೂ ಸಂಘಟನೆಯ ಮೂಲಕ ಇನ್ನಷ್ಟು ಸಬಲರಾಗಬೇಕು ಎಂದು ಕರೆ ನೀಡಿದರು.

ಸಮಾಜದಕಲ್ಯಾಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಅವುಗಳ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಈ ಸಮಾವೇಶವು ಸಮಾಜದಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಸಂಘಟಿತ ಶಕ್ತಿಯ ಪ್ರತೀಕವಾಗಿ ಮೂಡಿಬಂದಿದೆ. ವಿವಿಧ ಭಾಗಗಳಿಂದ ಆಗಮಿಸಿದ್ದ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು. ಸಮಾವೇಶದ ವೇಳೆ ಸಾಮಾಜಿಕ ಐಕ್ಯತೆ, ಶಿಕ್ಷಣದ ಅಗತ್ಯತೆ ಮತ್ತು ಯುವಜನರ ಪಾತ್ರದ ಕುರಿತು ವಿಶೇಷವಾಗಿ ಚರ್ಚಿಸಲಾಯಿತು.

ಕಾರ್ಯಕ್ರಮದಲ್ಲಿ ಬಾದಾಮಿ ಕ್ಷೇತ್ರದ ಶಾಸಕ ಭೀಮಸೇನ ಚಿಮ್ಮನಕಟ್ಟಿ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ನಿಗಮದ ಅಧ್ಯಕ್ಷ ಎಸ್. ಜಿ. ನಂಜಯ್ಯನಮಠ ಹಾಗೂ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಸಮಾಜದ ಮುಖಂಡರು, ಯುವಕರು ಹಾಗೂ ಮಹಿಳೆಯರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande