ಸಿಂದಗಿಯ ಗೋಲಗೇರಿಯಲ್ಲಿ ವಿದ್ಯಾ ವಿಕಾಸ ಎಜುಕೇಶನ್ ಸೊಸೈಟಿ ಆಂಗ್ಲ ಮಾಧ್ಯಮ ಶಾಲೆ ಉದ್ಘಾಟನೆ
ವಿಜಯಪುರ, 09 ಮೇ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ವಿದ್ಯಾ ವಿಕಾಸ ಎಜುಕೇಶನ್ ಸೊಸೈಟಿಯ ವತಿಯಿಂದ ಆರಂಭವಾಗಿರುವ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಉದ್ಘಾಟನಾ ಸಮಾರಂಭವು ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಸಚಿವ ಶಿವಾನಂದ ಪಾಟೀಲರವರೊಂದಿಗೆ ಶಾಸಕ
ಶಾಲೆ


ವಿಜಯಪುರ, 09 ಮೇ (ಹಿ.ಸ.) :

ಆಂಕರ್ : ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ವಿದ್ಯಾ ವಿಕಾಸ ಎಜುಕೇಶನ್ ಸೊಸೈಟಿಯ ವತಿಯಿಂದ ಆರಂಭವಾಗಿರುವ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಉದ್ಘಾಟನಾ ಸಮಾರಂಭವು ಅದ್ಧೂರಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಸಚಿವ ಶಿವಾನಂದ ಪಾಟೀಲರವರೊಂದಿಗೆ ಶಾಸಕ ಅಶೋಕ ಮನಗೂಳಿಯವರು ಭಾಗವಹಿಸಿ ನೂತನ ಶಾಲಾ ಕಟ್ಟಡವನ್ನು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಶಾಸಕ ಮನಗೂಳಿ, ಗ್ರಾಮೀಣ ಭಾಗದ ಮಕ್ಕಳಿಗೂ ನಗರ ಮಟ್ಟದ ಗುಣಮಟ್ಟದ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ಶಿಕ್ಷಣ ಸಂಸ್ಥೆಗಳು ಉತ್ತಮ ಸೇವೆ ನೀಡುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲ ಭಾಷೆಯ ಜ್ಞಾನ ಅತ್ಯಗತ್ಯವಾಗಿದ್ದು, ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಇಂತಹ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ಸಚಿವ ಶಿವಾನಂದ ಪಾಟೀಲರು ಮಾತನಾಡಿ, ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲ ಆಧಾರವಾಗಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗುವಂತಾಗಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣ ಸೌಲಭ್ಯಗಳನ್ನು ಹೆಚ್ಚಿಸುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಸಂಸ್ಥೆಯ ಅಧ್ಯಕ್ಷ ಬಿರಾದಾರ ಮಾತನಾಡಿ, ಸಿಂದಗಿ ಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಗೋಲಗೇರಿ ಗ್ರಾಮದಲ್ಲಿ ಆರಂಭವಾಗಿರುವ ಈ ಶಾಲೆ ಗ್ರಾಮೀಣ ಮಕ್ಕಳಿಗೆ ಹೊಸ ಅವಕಾಶಗಳನ್ನು ಕಲ್ಪಿಸಲಿದೆ ಎಂದು ಹೇಳಿದರು. ಜೊತೆಗೆ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸೇವಾಭಾವವನ್ನು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರು, ನಿರ್ದೇಶಕರು, ಆಡಳಿತ ಮಂಡಳಿ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಕಾರ್ಯಕರ್ತರು, ಪೋಷಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಗ್ರಾಮದಲ್ಲಿ ಹೊಸ ಶಿಕ್ಷಣ ಸಂಸ್ಥೆ ಆರಂಭವಾಗಿರುವುದಕ್ಕೆ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದು, ಇದರಿಂದ ಸುತ್ತಮುತ್ತಲಿನ ಗ್ರಾಮಗಳ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande