ನಾಳೆ ಪ್ರಧಾನಿ ಮೋದಿ ಕರ್ನಾಟಕ–ತೆಲಂಗಾಣ ಪ್ರವಾಸ
ನವದೆಹಲಿ, 09 ಮೇ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳಿಗೆ ಎರಡು ದಿನಗಳ ಅಧಿಕೃತ ಭೇಟಿಯನ್ನು ಕೈಗೊಳ್ಳಲಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಅವರು ಒಟ್ಟು ಸುಮಾರು ₹9,400 ಕೋಟಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ
Pm


ನವದೆಹಲಿ, 09 ಮೇ (ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳಿಗೆ ಎರಡು ದಿನಗಳ ಅಧಿಕೃತ ಭೇಟಿಯನ್ನು ಕೈಗೊಳ್ಳಲಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಅವರು ಒಟ್ಟು ಸುಮಾರು ₹9,400 ಕೋಟಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ತಿಳಿಸಿದೆ.

ತೆಲಂಗಾಣ ಪ್ರವಾಸದ ವೇಳೆ ಪ್ರಧಾನಿ ಹೈದರಾಬಾದ್ನಲ್ಲಿ ಹೈದರಾಬಾದ್–ಪಣಜಿ ಆರ್ಥಿಕ ಕಾರಿಡಾರ್ ಅಡಿಯಲ್ಲಿ ಗುಡೆಬೆಲ್ಲೂರು–ಮಹಬೂಬನಗರ ರಾಷ್ಟ್ರೀಯ ಹೆದ್ದಾರಿ–167ನ್ನು ಚತುಷ್ಪಥಗೊಳಿಸುವ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆ ರಾಜ್ಯಗಳ ನಡುವಿನ ಸಂಪರ್ಕವನ್ನು ಬಲಪಡಿಸುವ ಜೊತೆಗೆ ವ್ಯಾಪಾರ ಮತ್ತು ಸಾರಿಗೆ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ.

ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಕೈಗಾರಿಕಾ ಪ್ರದೇಶಕ್ಕೂ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ. ಸುಮಾರು 3,245 ಎಕರೆ ಪ್ರದೇಶದಲ್ಲಿ ಅಭಿವೃದ್ಧಿಯಾಗುವ ಈ ಯೋಜನೆಗೆ ₹2,350 ಕೋಟಿ ವೆಚ್ಚವಾಗಲಿದ್ದು, ಸುಮಾರು ₹10,000 ಕೋಟಿ ಹೂಡಿಕೆ ಆಕರ್ಷಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಇದರಿಂದ ದೊಡ್ಡ ಪ್ರಮಾಣದ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.

ವಾರಂಗಲ್ನಲ್ಲಿ ಪಿಎಂ ಮಿತ್ರ ಜವಳಿ ಉದ್ಯಾನಕ್ಕೂ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸುಮಾರು ₹1,700 ಕೋಟಿ ವೆಚ್ಚದ ಈ ಯೋಜನೆ ದೇಶದ ಜವಳಿ ವಲಯಕ್ಕೆ ಹೊಸ ಉತ್ತೇಜನ ನೀಡುವ ನಿರೀಕ್ಷೆಯಿದೆ.

ರೈಲು ಮೂಲಸೌಕರ್ಯ ಕ್ಷೇತ್ರದಲ್ಲಿ ಕಾಜಿಪೇಟ್–ವಿಜಯವಾಡ ಮಲ್ಟಿ ಟ್ರ್ಯಾಕಿಂಗ್ ಯೋಜನೆ ಹಾಗೂ ಕಾಜಿಪೇಟ್ ರೈಲು ಬೈಪಾಸ್ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗುತ್ತದೆ. ಇದು ದಕ್ಷಿಣ ಭಾರತದ ರೈಲು ಸಂಚಾರ ಸಾಮರ್ಥ್ಯವನ್ನು ಹೆಚ್ಚಿಸಲು ಸಹಾಯಕವಾಗಲಿದೆ.

ಇಂಧನ ವಲಯದಲ್ಲಿ ಇಂಡಿಯನ್ ಆಯಿಲ್ನ ಮಲ್ಕಾಪುರ ಗ್ರೀನ್ಫೀಲ್ಡ್ ಟರ್ಮಿನಲ್ ಉದ್ಘಾಟನೆ ನಡೆಯಲಿದೆ. ಜೊತೆಗೆ, ಸುಧಾರಿತ ಆರೋಗ್ಯ ಸೇವೆಗಳಿಗೆ ಸಂಬಂಧಿಸಿದ ಸಿಂಧು ಆಸ್ಪತ್ರೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗುತ್ತದೆ.

ತೆಲಂಗಾಣ ಕಾರ್ಯಕ್ರಮಗಳ ನಂತರ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಲಿದ್ದು, ಆರ್ಟ್ ಆಫ್ ಲಿವಿಂಗ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ಸಂಸ್ಥೆಯ 45ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಹೊಸದಾಗಿ ನಿರ್ಮಿಸಲಾದ ಧ್ಯಾನ್ ಮಂದಿರವನ್ನು ಉದ್ಘಾಟಿಸುವುದರ ಜೊತೆಗೆ ಸಾಮಾಜಿಕ, ಗ್ರಾಮೀಣ ಅಭಿವೃದ್ಧಿ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande