
ಚಿಂತಾಮಣಿ, 09 ಮೇ (ಹಿ.ಸ.) :
ಆ್ಯಂಕರ್ : ಚಿಂತಾಮಣಿಯ ಬಾಲಕರ ಪದವಿ ಪೂರ್ವ ಕಾಲೇಜು ಹಾಗೂ ಬಾಲಕಿಯರ ಪದವಿ ಪೂರ್ವ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳ ಉನ್ನತೀಕರಣ ಮತ್ತು ಕಟ್ಟಡ ನವೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಸುಮಾರು 16 ಲಕ್ಷ ರೂಪಾಯಿ ವೆಚ್ಚದಲ್ಲಿ ಬಾಲಕರ ಕಾಲೇಜಿನ ಅಭಿವೃದ್ಧಿ ಕಾಮಗಾರಿ ಹಾಗೂ 20 ಲಕ್ಷ ರೂಪಾಯಿ ವೆಚ್ಚದಲ್ಲಿ ಬಾಲಕಿಯರ ಕಾಲೇಜಿನ ನವೀಕರಣ ಕಾರ್ಯಗಳನ್ನು ಆರಂಭಿಸಲಾಗಿದೆ.
ಕಾರ್ಯಕ್ರಮಕ್ಕೆ ಸಚಿವ ಎಂ.ಸಿ.ಸುಧಾಕರ ಚಾಲನೆ ನೀಡಿ ಕಾಲೇಜು ಆವರಣವನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ತಕ್ಷಣ ಒದಗಿಸುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಕಾಲೇಜುಗಳಲ್ಲಿ ಶೌಚಾಲಯ, ಕುಡಿಯುವ ನೀರು, ತರಗತಿ ಕೊಠಡಿ ಹಾಗೂ ಮೂಲಸೌಕರ್ಯಗಳ ಗುಣಮಟ್ಟ ಹೆಚ್ಚಿಸುವ ಅಗತ್ಯವನ್ನು ಸಚಿವರು ಒತ್ತಿ ಹೇಳಿದರು. ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಾಣವಾಗಬೇಕು ಎಂದು ಅವರು ತಿಳಿಸಿದರು.
ಸ್ಥಳೀಯ ಅಧಿಕಾರಿಗಳು, ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa