
ಗದಗ, 09 ಮೇ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವರುಗಳ ಸಹಯೋಗದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ 2026 ಕಾರ್ಯಕ್ರಮವನ್ನು ಕೆ.ಎಚ್. ಪಾಟಿ¯ ಸಭಾಭವನದ ಎ.ಪಿ.ಎಂ.ಸಿ. ಯಾರ್ಡದಲ್ಲಿ ಮೇ 10 ರಂದು ಬೆಳಗ್ಗೆ 10:30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.
ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಹಾಗೂ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ , ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ, ಹಾವೇರಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಸಂಸದ ಪಿ.ಸಿ.ಗದ್ದಿಗೌಡರ, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ, ನರಗುಂದ ಶಾಸಕ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ವಿಧಾನ ಪರಿಷತ್ ಶಾಸಕರುಗಳಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ಆಗಮಿಸುವರು.
ವಿಶೇಷ ಆಹ್ವಾನಿತರಾಗಿ ಯೋಜನೆ ಕಾರ್ಯಕ್ರಮಗಳು, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಕಾರ್ಯದರ್ಶಿಗಳು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ. ವಿ. ವೆಂಕಟೇಶ್, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಶ್ರೀಮತಿ ಜಾನಕಿ ಕೆ.ಎಂ, ಆಗಮಿಸಲಿದ್ದಾರೆ.
ಶಿರಹಟ್ಟಿ ಲೇಖಕಿ, ಉಪನ್ಯಾಸಕಿ ಶ್ರೀಮತಿ ಸುಧಾ ಹುಚ್ಚಣ್ಣವರ ಶಿವಶರಣೆ ಹೇಮರಡ್ಡಿ ಮಲ್ಲಮ್ಮರ ಜೀವನ ಮತ್ತು ಸಂದೇಶ ಕುರಿತು ಉಪನ್ಯಾಸ ನೀಡಲಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ ಆರ್. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಸವರಾಜ ವಿ ಬಳ್ಳಾರಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP