ಬೆಂಬಲ ಬೆಲೆ ಯೋಜನೆ ಕಡಲೆ ಕಾಳು ಖರೀದಿ ಅವಧಿ ವಿಸ್ತರಣೆ
ಧಾರವಾಡ, 09 ಮೇ (ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಲ್ಗೆ ರೂ. 5,875 ರಂತೆ ಖರೀದಿಸಲು ನಿಗದಿಪಡಿಸಿರುವ ಕಾಲಾವಧಿಯನ್ನು ಏಪ್ರೀಲ್ 28, 2026 ರಿಂದ ಮೇ
ಬೆಂಬಲ ಬೆಲೆ ಯೋಜನೆ ಕಡಲೆ ಕಾಳು ಖರೀದಿ ಅವಧಿ ವಿಸ್ತರಣೆ


ಧಾರವಾಡ, 09 ಮೇ (ಹಿ.ಸ.) :

ಆ್ಯಂಕರ್ : 2025-26 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಲ್ಗೆ ರೂ. 5,875 ರಂತೆ ಖರೀದಿಸಲು ನಿಗದಿಪಡಿಸಿರುವ ಕಾಲಾವಧಿಯನ್ನು ಏಪ್ರೀಲ್ 28, 2026 ರಿಂದ ಮೇ 28, 2026 ರವರೆಗೆ ವಿಸ್ತರಿಸಿದ್ದು, ನೋಂದಾಯಿತ ರೈತರಿಂದ ಮಾತ್ರ ಖರೀದಿಸಲಾಗುವುದು.

ಕಡಲೆಕಾಳು ಉತ್ಪನ್ನವನ್ನು ಪ್ರತಿ ಎಕರೆಗೆ 4 ಕ್ವಿಂಟಲ್ನಂತೆ ಪ್ರತಿ ರೈತರಿಂದ ಗರಿಷ್ಟ 40 ಕ್ವಿಂಟಲ್ ಖರೀದಿಸಲಾಗುತ್ತಿದ್ದು, ಜಿಲ್ಲೆಯಲ್ಲಿ 35 ಕಡಲೆಕಾಳು ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾಮಂಡಳ ಶಾಖೆ ಹುಬ್ಬಳ್ಳಿ ದೂರವಾಣಿ ಸಂಖ್ಯೆ: 0836-2004419 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande