ಬನಶಂಕರಿಯಲ್ಲಿ ದೇವಾಂಗ ಜಾಗೃತಾ ಸಮಾವೇಶ: ಕುಂಭ ಮೆರವಣಿಗೆಗೆ ಬಿಗಿ ಪೊಲೀಸ್ ಬಂದೋಬಸ್ತ್
ಬಾಗಲಕೋಟೆ, 09 ಮೇ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯ ಬನಶಂಕರಿ ಕ್ಷೇತ್ರದಲ್ಲಿ ನಡೆದ ಅಖಿಲ ಭಾರತ ದೇವಾಂಗ (ನೇಕಾರ) ಜಾಗೃತಾ ಸಮಾವೇಶ-2026 ಹಾಗೂ ಭವ್ಯ ಕುಂಭ ಮೆರವಣಿಗೆ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಸೂ
ಬಾದಾಮಿ


ಬಾಗಲಕೋಟೆ, 09 ಮೇ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯ ಬನಶಂಕರಿ ಕ್ಷೇತ್ರದಲ್ಲಿ ನಡೆದ ಅಖಿಲ ಭಾರತ ದೇವಾಂಗ (ನೇಕಾರ) ಜಾಗೃತಾ ಸಮಾವೇಶ-2026 ಹಾಗೂ ಭವ್ಯ ಕುಂಭ ಮೆರವಣಿಗೆ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದರು.

ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು, ದೇವಾಂಗ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಸಮಾವೇಶದಲ್ಲಿ ಭಾಗವಹಿಸಿದ್ದ ಹಿನ್ನೆಲೆಯಲ್ಲಿ ಬಾದಾಮಿ ಪೊಲೀಸರು ವಿಶೇಷ ಎಚ್ಚರಿಕೆ ವಹಿಸಿ ಭದ್ರತಾ ಕ್ರಮಗಳನ್ನು ಕೈಗೊಂಡರು. ದೇವಸ್ಥಾನ ಸುತ್ತಮುತ್ತ, ಮೆರವಣಿಗೆ ಮಾರ್ಗ, ವಾಹನ ನಿಲುಗಡೆ ಪ್ರದೇಶ ಹಾಗೂ ಜನಸಂದಣಿ ಹೆಚ್ಚಾಗುವ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಮೆರವಣಿಗೆಯ ವೇಳೆ ಸಂಚಾರ ದಟ್ಟಣೆ ಉಂಟಾಗದಂತೆ ಟ್ರಾಫಿಕ್ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲಾಯಿತು. ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಮಕ್ಕಳ ಸುರಕ್ಷತೆಗೆ ವಿಶೇಷ ಗಮನ ಹರಿಸಲಾಯಿತು. ಸಾರ್ವಜನಿಕರು ಯಾವುದೇ ಅಡಚಣೆ ಇಲ್ಲದೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಪೊಲೀಸ್ ಇಲಾಖೆ ಅಗತ್ಯ ಸೌಲಭ್ಯ ಒದಗಿಸಿತು.

ಸಮಾವೇಶ ಮತ್ತು ಕುಂಭ ಮೆರವಣಿಗೆ ಶಾಂತಿಯುತವಾಗಿ ಹಾಗೂ ಯಶಸ್ವಿಯಾಗಿ ನಡೆಯಲು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಹಾಜರಿದ್ದು ಮೇಲ್ವಿಚಾರಣೆ ನಡೆಸಿದರು. ಭಕ್ತರು ಹಾಗೂ ಸಾರ್ವಜನಿಕರು ಸಹ ಪೊಲೀಸರ ಸೂಚನೆಗಳನ್ನು ಪಾಲಿಸಿ ಕಾರ್ಯಕ್ರಮ ಯಶಸ್ವಿಗೆ ಸಹಕರಿಸಿದರು.

ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಕೈಗೊಂಡ ಬಂದೋಬಸ್ತ್ ವ್ಯವಸ್ಥೆಗೆ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಯಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande