ಬಂಗಾಳದಲ್ಲಿ ಬಿಜೆಪಿ ಸರ್ಕಾರ ; ತಮಿಳುನಾಡಿನಲ್ಲಿ ಮುಂದುವರೆದ ಅನಿಶ್ಚಿತತೆ
ನವದೆಹಲಿ, 09 ಮೇ (ಹಿ.ಸ.) : ಆ್ಯಂಕರ್ : ಪಶ್ಚಿಮ ಬಂಗಾಳದಲ್ಲಿ ಶನಿವಾರ ಭಾರತೀಯ ಜನತಾ ಪಕ್ಷವು ಮೊದಲ ಬಾರಿಗೆ ಸರ್ಕಾರ ರಚಿಸಲಿದೆ. ಎರಡು ಬಾರಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದ ಸುವೇಂದು ಅಧಿಕಾರಿ ಅವರು ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದ
ಸುವೇಂದು, ವಿಜಯ


ನವದೆಹಲಿ, 09 ಮೇ (ಹಿ.ಸ.) :

ಆ್ಯಂಕರ್ : ಪಶ್ಚಿಮ ಬಂಗಾಳದಲ್ಲಿ ಶನಿವಾರ ಭಾರತೀಯ ಜನತಾ ಪಕ್ಷವು ಮೊದಲ ಬಾರಿಗೆ ಸರ್ಕಾರ ರಚಿಸಲಿದೆ. ಎರಡು ಬಾರಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದ ಸುವೇಂದು ಅಧಿಕಾರಿ ಅವರು ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ.

ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಇಂದು ನಡೆಯುವ ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ನಿತಿನ್ ನವೀನ್ ಹಾಗೂ ಎನ್ಡಿಎ ಆಡಳಿತದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದಾರೆ.

294 ಸದಸ್ಯರಿರುವ ಪಶ್ಚಿಮ ಬಂಗಾಳ ವಿಧಾನ ಸಭೆಯಲ್ಲಿ ಬಿಜೆಪಿ 207 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಲಿದೆ.

ಇದೇ ವೇಳೆ ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆ ಕುರಿತು ಅನಿಶ್ಚಿತತೆ ಮುಂದುವರೆದಿದೆ. ರಾಜ್ಯಪಾಲರು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ಸಿ. ಜೋಸೆಫ್ ವಿಜಯ್ ಅವರನ್ನು ಸರ್ಕಾರ ರಚನೆಗೆ ಇನ್ನೂ ಆಹ್ವಾನಿಸಿಲ್ಲ. ಟಿವಿಕೆ ಪಕ್ಷಕ್ಕೆ ಬಹುಮತದ ಕೊರತೆ ಹಿನ್ನೆಲೆಯಲ್ಲಿ ಸರಕಾರ ರಚನೆಯಲ್ಲಿ ಅನಿಶ್ಚಿತತೆ ಮುಂದುವರೆದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande