
ಕೋಲ್ಕತ್ತಾ, 09 ಮೇ (ಹಿ.ಸ.) :
ಆ್ಯಂಕರ್ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದ ಭಾರತೀಯ ಜನತಾ ಪಕ್ಷದ ನಾಯಕ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಒಂಬತ್ತನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಶನಿವಾರ ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ರಾಜ್ಯಪಾಲ ಆರ್. ಎನ್. ರವಿ ಅವರು ಸುವೇಂದು ಅಧಿಕಾರಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು
ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.
ಸುವೇಂದು ಅಧಿಕಾರಿ ಜೊತೆಗೆ ಹಿರಿಯ ಬಿಜೆಪಿ ನಾಯಕರುಗಳಾದ ದಿಲೀಪ್ ಘೋಷ್, ಅಗ್ನಿಮಿತ್ರಾ ಪಾಲ್ ಹಾಗೂ ಅಶೋಕ್ ಕೀರ್ತಾನಿಯಾ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa